ಕಂಡಹಾಗೆ ಮತ್ತು ನೂರರ ನೋಟ ಪುಸ್ತಕಗಳ ಬಿಡುಗಡೆ

Date: 05-09-2019

Location: ಬೆಂಗಳೂರು


ಪತ್ರಕರ್ತೆ ಗೌರಿ ಲಂಕೇಶರ ಸಂಪಾದಕೀಯ ಬರಹಗಳ ಸಂಗ್ರಹ ’ಕಂಡಹಾಗೆ’ ಹಾಗೂ ಸ್ವಾತಂತ್ಯ್ರ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಅಂಕಣಗಳ ಸಂಗ್ರಹ ’ನೂರರ ನೋಟ’ ಪುಸ್ತಕಗಳು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆಯಾದವು.

ಗೌರಿ ಸ್ಮಾರಕ ಟ್ರಸ್ಟ್‌ ಆಯೋಜಿಸಿದ್ದ ’ಗೌರಿ ನೆನಪು ಮತ್ತು ಸುಬ್ಬಯ್ಯ ಶ್ರದ್ಧಾಂಜಲಿ’ ಕಾರ್ಯಕ್ರಮದಲ್ಲಿ ಕವಿತಾ ಲಂಕೇಶ್ ಹಾಗೂ ಯುವ ಹೋರಾಟಗಾರ ಕನ್ಹಯ್ಯ ಕುಮಾರ್ ಕೃತಿ ಬಿಡುಗಡೆ ಮಾಡಿದರು.

ಗೌರಿ ಲಂಕೇಶರ ಪುಸ್ತಕದ ಬಗ್ಗೆ ಮಾತನಾಡಿದ ಸಾಹಿತಿ ಕೆ. ಶರೀಫಾ, ‘ಗೌರಿ ನಂಬಿಕೊಂಡು ಬಂದಿರುವ ಸಮಾನತೆ, ಸೌಹಾರ್ದದ ಅಂಶಗಳು ಈ ಕೃತಿಯಲ್ಲಿ ದಾಖಲಾಗಿವೆ’ ಎಂದರು.

ಬೆಂಗಳೂರು ನಗರದ ಸೇಂಟ್ ಜೋಸೆಫ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎಚ್. ಎಸ್. ದೊರೆಸ್ವಾಮಿ , ಕನ್ಹಯ್ಯ ಕುಮಾರ್, ಕವಿತಾ ಲಂಕೇಶ್, ಎ.ಎಸ್. ಪೊನ್ನಣ್ಣ, ಕೆ.ಎಲ್ ಅಶೋಕ್, ಇಶಾ ಲಂಕೇಶ್ ಮತ್ತಿತರರು ಉಪಸ್ಥಿತರಿದ್ದರು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...