ಕನ್ನಡ ಮನಸ್ಸುಗಳನ್ನು ನೋಯಿಸಿದ್ದರೆ ಕ್ಷಮೆ ಇರಲಿ: ಸಾಹಿತಿ ದೊಡ್ಡರಂಗೇಗೌಡ

Date: 27-01-2021

Location: ಬೆಂಗಳೂರು


‘ಕನ್ನಡದ ವಿರುದ್ಧ ನಾನು ಮಾತನಾಡಿಲ್ಲ. ಕನ್ನಡವನ್ನು ಭಯ-ಭಕ್ತಿಯಿಂದ ತಲೆಯ ಮೇಲಿಟ್ಟುಕೊಂಡು ಮೆರೆಸುತ್ತೇನೆ. ನನ್ನ ಮಾತಿನಿಂದ ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ’.

ಹಾವೇರಿಯಲ್ಲಿ 2021ರ ಫೆಬ್ರವರಿಯಲ್ಲಿ ಜರುಗಲಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ. ದೊಡ್ಡರಂಗೇಗೌಡ ಅವರು ಹೇಳಿರುವ ಮಾತುಗಳಿವು.

ಸಮ್ಮೇಳನ ಅಧ್ಯಕ್ಷರಾಗಿ ತಮ್ಮ ಹೆಸರು ಘೋಷಣೆಯಾದ ಬೆನ್ನಲ್ಲೇ ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದ್ದರು. ಕಲಿಕಾ ಮಾಧ್ಯಮವಾಗಿ ಇಲ್ಲವೇ ವ್ಯವಹಾರಿಕವಾಗಿ ಇಂಗ್ಲಿಷ್ ಭಾಷೆಯನ್ನು ಒಪ್ಪುವುದಾದರೆ ಹಿಂದಿ ಭಾಷೆಗೇಕೆ ವಿರೋಧ ? ಕನ್ನಡದ ಮೇಲೆ ಹಿಂದಿ ಹೇರಿಕೆಯ ಸಮರ್ಥನೆ... ಹೀಗೆ ವಿವಿಧ ಅರ್ಥಗಳು ಬರುವ ರೀತಿಯಲ್ಲಿಅವರ ವಿಚಾರಗಳು ಮುದ್ರಣಗೊಂಡಿದ್ದು, ಕನ್ನಡ ಸಾಹಿತ್ಯ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಡಾ. ದೊಡ್ಡರಂಗೇಗೌಡರು ‘ನಾನೇನು ಯಾವುದೇ ಭಾಷೆಯನ್ನು ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ ನಾನು ಭಕ್ತಿಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತೇನೆ. ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಭಾಷೆಯ ಹೇರಿಕೆಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...