ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ರೂಪ ನೀಡಿದ ಸಚಿವ ಸುನೀಲ್ ಕುಮಾರ್

Date: 18-09-2021

Location: ಬೆಂಗಳೂರು


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ ಅವಶ್ಯ ಎಂದು ಹೇಳಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಅದರಂತೆ ರಾಜ್ಯದ ನಾಲ್ಕೂ ಕಂದಾಯ ವಿಭಾಗದ ವಲಯವಾರು ಜಂಟಿ ನಿರ್ದೇಶಕರ ನೇಮಕಾತಿ ಮಾಡಿ ಅಧಿಕೃತ ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ತಿಂಗಳು ವಿವಿಧ ಪ್ರಾಧಿಕಾರ ಮತ್ತು ಅಕಾಡೆಮಿ ಅಧ್ಯಕ್ಷರುಗಳ ಮಂಥನ ಸಭೆಯಲ್ಲಿ ನಾಲ್ಕೂ ವಲಯಗಳಿಗೆ ಜಂಟಿ ನಿರ್ದೇಶಕರ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದ ಸಚಿವ ಸುನೀಲ್ ಕುಮಾರ್ ಈ ಆದೇಶ ಹೊರಡಿಸುವ ಮೂಲಕ ಅದನ್ನು ಈಡೇರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸುವ ದೃಷ್ಟಿಯಿಂದ ಹಾಗೂ ರಾಜ್ಯದ ಎಲ್ಲೆಡೆಯಿಂದ ಸಾಹಿತಿಗಳು, ಕಲಾವಿದರು, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕೇಂದ್ರ ಕಚೇರಿಗೇ ಬರುವ ಅನಿವಾರ್ಯತೆಯನ್ನು ತಪ್ಪಿಸಿ ಆಯಾ ವಲಯವಾರು ಜಂಟಿ ನಿರ್ದೇಶಕರುಗಳ ಬಳಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಈ ದೃಷ್ಟಿಯಿಂದ ಬೆಂಗಳೂರು, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ವಲಯಗಳಲ್ಲಿ ವಲಯವಾರು ಜಂಟಿ ನಿರ್ದೇಶಕರನ್ನು ನೇಮಕ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಈ ವಲಯವಾರು ಜಂಟಿ ನಿರ್ದೇಶಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಒಳಗೆ ಎಲ್ಲಾ ಜಂಟಿ ನಿರ್ದೇಶಕರು ತಮಗೆ ಸೂಚಿಸಿದ ವಲಯ ಕಚೇರಿಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಹಾಗೂ ನೂರು ದಿನಗಳ ಕಾರ್ಯಯೋಜನೆ ಸಿದ್ಧಪಡಿಸಬೇಕೆಂದು ಆದೇಶದಲ್ಲಿ ಹೇಳಲಾಗಿದೆ.

ವಿವರ

• ಕೇಂದ್ರ ಕಚೇರಿಯಲ್ಲಿ ಇದ್ದ (ಸುವರ್ಣ ಕರ್ನಾಟಕ) ಜಂಟಿ ನಿರ್ದೇಶಕರ ಹುದ್ದೆ ಬೆಂಗಳೂರಿನಲ್ಲಿಯೇ ಮುಂದುವರಿಕೆ

• ಆಡಳಿತಾಧಿಕಾರಿ, ರಂಗಾಯಣ, ಧಾರವಾಡ ಈ ಹುದ್ದೆಯನ್ನು ಕೇಂದ್ರ ಕಚೇರಿ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರ.

• ಜಂಟಿ ನಿರ್ದೇಶಕರು (ಸಾಮಾನ್ಯ) ಹುದ್ದೆಯನ್ನು ಬೆಂಗಳೂರು ವಿಭಾಗ ಜಂಟಿ ನಿರ್ದೇಶಕರಾಗಿ ಸ್ಥಳಾಂತರ.

• ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರು (ಆಡಳಿತ) ಹುದ್ದೆಯನ್ನು ಮೈಸೂರು ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರ.

• ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರು (ಕಾರ್ಯಕ್ರಮ) ಈ ಹುದ್ದೆಯನ್ನು ಕಲಬುರ್ಗಿ ವಲಯದ ಜಂಟಿ ನಿರ್ದೇಶಕರಾಗಿ ವರ್ಗಾವಣೆ

• ಜಂಟಿ ನಿರ್ದೇಶಕರು, ಶಿವಮೊಗ್ಗ ರಂಗಾಯಣ ಈ ಹುದ್ದೆಯನ್ನು ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರ.

• ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಯ ಹುದ್ದೆಗೆ ರಿಜಿಸ್ಟ್ರಾರ್ ಸಂಗೀತ ನೃತ್ಯ ಅಕಾಡೆಮಿ ಹುದ್ದೆಯ ಸ್ಥಳಾಂತರ.

• ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಹುದ್ದೆಗೆ ಕೇಂದ್ರ ಕಚೇರಿಯಲ್ಲಿದ್ದ ಸಹಾಯಕ ನಿರ್ದೇಶಕರ ಹುದ್ದೆಯ ಸ್ಥಳಾಂತರ.

• ಧಾರವಾಡ ರಂಗಾಯಣ ಆಡಳಿತಾಧಿಕಾರಿ ಹುದ್ದೆಗೆ ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಯ ಸ್ಥಳಾಂತರ.

• ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಗೆ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು (ಕಾರ್ಯಕ್ರಮ) ಹುದ್ದೆಯ ಸ್ಥಳಾಂತರ..

ಈ ಎಲ್ಲಾ ಹುದ್ದೆಗಳಿಗೆ ಸಂಬಂಧಪಟ್ಟ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು,ಈ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತ ವಿಕೇಂದ್ರೀಕರಣ ಹಾಗೂ ಸುಧಾರಣೆಗೆ ದೃಢ ಹೆಜ್ಜೆ ಇಡಲಾಗಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸುಧಾರಣಾ ಕ್ರಮ ಈ ಮೂಲಕ ಅನುಷ್ಠಾನಕ್ಕೆ ತರುವಲ್ಲಿ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.

 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...