Date: 16-03-2024
Location: ಬೆಂಗಳೂರು
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಮೂರು ವರ್ಷಗಳ ಅವಧಿಗೆ ಅಧ್ಯಕ್ಷ ಹಾಗೂ ಸದಸ್ಯರುಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ(ನವದೆಹಲಿ), ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ(ವಿಜಯಪುರ), ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಮಾನಸ(ಮೈಸೂರು), ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಶೋಕ್ ಚಂದರಗಿ(ಬೆಳಗಾವಿ), ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ. ಎಲ್. ಎನ್. ಮುಕುಂದರಾಜ್(ತುಮಕೂರು), ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ತಲ್ಲೂರು ಶಿವರಾಮಶೆಟ್ಟಿ(ಉಡುಪಿ), ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶಿವಪ್ರಸಾದ್ ಗೊಲ್ಲಹಳ್ಳಿ(ಚಿಕ್ಕಬಳ್ಳಾಪುರ), ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು ಎಚ್(ದಕ್ಷಿಣ ಕನ್ನಡ) ನೇಮಕವಾಗಿದ್ದಾರೆ.
ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ ಸ ಕುಮಾರ್(ಬೆಂಗಳೂರು), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್(ದಕ್ಷಿಣ ಕನ್ನಡ), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟಾನ್ಲಿ ಅಲ್ವಾರಿಸ್(ದಕ್ಷಿಣ ಕನ್ನಡ) ನೇಮಕವಾಗಿದ್ದಾರೆ.







ರಾಂಚಿಯ ಜಿಲ್ಲಾ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪುಸ್ತಕ ಮೇಳವು ಓದುಗರ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿ...
ಚಿಕ್ಕಮಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಮಗಳೂರು ವತಿಯಿಂದ ಇತ...
ಚಿತ್ರದುರ್ಗ: ಆಶುಕವನಗಳಲ್ಲಿ ತತ್‌ಕ್ಷಣಕ್ಕೆ ಹೊಳೆಯುವ ವಿಚಾರಗಳನ್ನು ಅಭಿವ್ಯಕ್ತಿಸುವ ಕಲೆ ವಿರಳವಾದುದು. ಕವಿ ತಿಪ...
©2025 Book Brahma Private Limited.