ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Date: 30-06-2022

Location: ಬೆಂಗಳೂರು


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022- 23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2022 ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ. 50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. 25 ರೂ. ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ದಿನಾಂಕ 1-07-2022ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು.

ಹೆಚ್ಚಿನ ವಿವರಗಳಿಗೆ: 080 26623584 , 26612991, 22423867, 26672992, 8661777643

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...