'ಕನ್ನಡ ಪುಸ್ತಕ ಸೊಗಸು ಬಹುಮಾನ'ಕ್ಕೆ ಕೃತಿಗಳ ಆಹ್ವಾನ

Date: 12-03-2025

Location: ಬೆಂಗಳೂರು


ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ನೇ ಸಾಲಿನಲ್ಲಿ ಜನವರಿಯಿಂದ ಡಿಸೆಂಬರ್‌ವರೆಗೆ ಕನ್ನಡದಲ್ಲಿ ಪ್ರಕಟವಾದ ಕೃತಿಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ 'ಕನ್ನಡ ಪುಸ್ತಕ ಸೊಗಸು ಬಹುಮಾನ'ಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.

ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು ಚಿತ್ರ ಕಲಾವಿದರ ಪೂರ್ಣ ವಿಳಾಸ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು 29 ರೊಳಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್‌ ಸಿಂಗ್ ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು -02.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https:// kpp.kamataka.gov.in ಅಥವಾ ದೂರವಾಣಿ: 080-2248 4516/ 2210 77040.

MORE NEWS

ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಎಂ.ಆರ್. ದತ್ತಾತ್ರಿಯವರ 'ಸರ್ಪಭ್ರಮೆ' ಭಾಜನ

16-03-2025 ಬೆಂಗಳೂರು

ಧಾರವಾಡ: ಸಾಹಿತ್ಯ ಗಂಗಾ ಧಾರವಾಡದ ವತಿಯಿಂದ ಕೊಡಮಾಡುವ 2024ನೇ ಸಾಲಿನ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ ಪ್ರಕಟವಾ...

ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ ಇನ್ನಿಲ್ಲ

15-03-2025 ಬೆಂಗಳೂರು

ಮಂಗಳೂರು: ಕನ್ನಡ-ತುಳು ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ವಾಮನ ನಂದಾವರ (82) ಶನಿವಾರ ನಿಧ...

Panchakshari Hiremath; ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ವಿಧಿವಶ

15-03-2025 ಬೆಂಗಳೂರು

ಧಾರವಾಡ: ಬಹು ಭಾಷಾ ಪಂಡಿತರು, ಹಿರಿಯ ಸಾಹಿತಿಗಳು, ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪಂಚಾಕ್ಷ...