ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸಲು ಸದವಕಾಶ

Date: 01-07-2022

Location: ಬೆಂಗಳೂರು


ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವನ್ನು ಕನ್ನಡಿಗರಿಗೆ ಕೊಡುವುದಾಗಿ ನಾಡೋಜ ಡಾ. ಮಹೇಶ ಜೋಶಿ ಅವರು ಕರೆನೀಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧೈಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಹಿನ್ನೆಲೆಯಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಕನ್ನಡಪರ ಸಂಘ-ಸಂಸ್ಥೆಗಳಲ್ಲಿ, ಬ್ಯಾಂಕಿಂಗ್ ಹಾಗೂ ಸಾರ್ವಜನಿಕ ಉದ್ಯಮ ಕ್ಷೇತ್ರಗಳಲ್ಲಿ ಸೇರಿದಂತೆ ಇನ್ನಿತರೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದವರಿಗೆ ಹಾಗೂ ಕನ್ನಡ ಸೇವಾಸಕ್ತರಾದ ಯುವಕ-ಯುವತಿಯರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

ಉತ್ತಮವಾದ ಕನ್ನಡ ಜ್ಞಾನವನ್ನು ಹೊಂದಿದ, ಆಡಳಿತದಲ್ಲಿ ಅನುಭವ ಹೊಂದಿದ, ಸಾಮಾಜಿಕ ಜಾಲತಾಣ ನಿರ್ವಹಣೆಯ ಜ್ಞಾನವುಳ್ಳ, ಗಣಕಯಂತ್ರದಲ್ಲಿ, ಲೆಕ್ಕಪತ್ರಗಳಲ್ಲಿ ಅನುಭವ ಹೊಂದಿದ, ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ತಪ್ಪಿಲ್ಲದೆ ಮಾತನಾಡಬಲ್ಲ ಹಾಗೂ ಓದಲು ಬರೆಯಲು ಬಲ್ಲವರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ವಾಸವಿರುವ, ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಸಮೀಪದವರಿಗೆ, ಹೆಚ್ಚಿನ ಪ್ರಾಧಾನ್ಯತೆ ಕೊಡಲಾಗುವುದು.

ಇದು ಯಾವುದೇ ಸರ್ಕಾರಿ ನೌಕರಿ ಅಥವಾ ಹುದ್ದೆ ಆಗಿರುವುದಿಲ್ಲ. ಬದಲಾಗಿ, ಗೌರವಯುತವಾದ ಸ್ಥಾನವಾಗಿದ್ದು, ಕನ್ನಡ ನಾಡು-ನುಡಿಗೆ ಸಲ್ಲಿಸುವ ಈ ಸೇವೆಗೆ ಸೂಕ್ತವಾದ ಗೌರವ ಸಂಭಾವನೆಯನ್ನು ನೀಡಲಾಗುವುದು.

ಆಕಾಂಕ್ಷಿಗಳು ಉದ್ಯೋಗ ಮತ್ತು ಕನ್ನಡ ಪರ ಕೆಲಸಗಳ ವಿವರಗಳೊಂದಿಗೆ ತಮ್ಮ ಸ್ವ-ಪರಿಚಯ ಹೊಂದಿರುವ ಅರ್ಜಿಯನ್ನು ಜುಲೈ 10 ರ ಒಳಗೆ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ವಿಳಾಸಕ್ಕೆ ಕಳುಹಿಸಬೇಕು. ಬಂದ ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತವಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...