ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಮಹೇಶ ಜೋಶಿ

Date: 25-11-2021

Location: ಬೆಂಗಳೂರು


ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಅಧಿಕಾರಾವಧಿ ಮೂರರಿಂದ ಐದು ವರ್ಷಗಳಿಗೆ ವಿಸ್ತರಣೆಗೊಂಡ ಬಳಿಕ ನಡೆದ ಮೊದಲ ಚುನಾವಣೆಯ ಮತದಾನವು 21-11-2021 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ರಾಜ್ಯದ ಎಲ್ಲಾ ತಾಲ್ಲೂಕುಗಳು ಹಾಗೂ ಕೆಲವು ಹೋಬಳಿ ಕೇಂದ್ರಗಳು, ಬೆಂಗಳೂರು ನಗರ ಜಿಲ್ಲೆಯ 28 ವಿಧಾನ ಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 420 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿ ನಡೆಸಲಾಗಿದೆ. 

ಯಾದಗಿರಿ ಜಿಲ್ಲಾ ಅಧ್ಯಕ್ಷರ ಹಾಗೂ ತಮಿಳುನಾಡು ಗಡಿನಾಡ ಘಟಕ ಅಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬ ಅಭ್ಯರ್ಥಿ ಅಂತಿಮವಾಗಿ ಕಣದಲ್ಲಿದ್ದ ಕಾರಣ ಹಾಗೂ ಗೋವಾ ಗಡಿನಾಡ ಘಟಕ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೇ ಇದ್ದುದ್ದರಿಂದ ಇಲ್ಲಿ ಚುನಾವಣೆಯನ್ನು ನಡೆಸಿರಲಿಲ್ಲ. ಉಳಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ, 29 ಜಿಲ್ಲಾ ಘಟಕಗಳ ಅಧ್ಯಕ್ಷರ ಹಾಗೂ ಕೇರಳ ಮಹಾರಾಷ್ಟ್ರ, ಆಂಧ್ರಪ್ರದೇಶ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ನಡೆಸಲಾಗಿದೆ. 

ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷ: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಶಿ ಆಯ್ಕೆಯಾಗಿದ್ದಾರೆ. 24-11-2021 ಬೆಳಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ಚುನಾವಣಾಧಿಕಾರಿಗಳು ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ, ಗಡಿನಾಡು ಘಟಕಗಳ ಅಧ್ಯಕ್ಷರ ಫಲಿತಾಂಶವನ್ನು ಘೋಷಣೆ ಮಾಡಲಾಯಿತು. ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ, ಎಲ್ಲಾ ಜಿಲ್ಲೆಗಳಿಂದ ಬಂದ ಮತಗಳ ಎಣಿಕೆ ವಿವರಗಳನ್ನು ಹಾಗೂ ಅಂಚೆ ಮೂಲಕ ಬಂದ ಮತಗಳನ್ನು ಕ್ರೋಡೀಕರಿಸಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ಸಹ ಅಧಿಕೃತವಾಗಿ ಘೋಷಿಸಲಾಗಿದೆ. 

310153 ಅರ್ಹ ಮತದಾರರಲ್ಲಿ ರಾಜ್ಯ, ಗಡಿರಾಜ್ಯ, ಹೊರರಾಜ್ಯ ಸೇರಿದಂತೆ ಒಟ್ಟು 162486 ಮತದಾರರು ಮತ ಚಲಾಯಿಸಿದ್ದು, 69431 ಮತಗಳನ್ನು ಪಡೆದ ನಾಡೋಜ ಡಾ ಮಹೇಶ ಜೋಶಿಯವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. 

ರಾಜ್ಯದ 30 ಜಿಲ್ಲೆಗಳು ಹಾಗೂ ಗಡಿ ರಾಜ್ಯಗಳು, ಹೊರರಾಜ್ಯಗಳು ಮತ್ತು ಹೊರದೇಶದ ಮತದಾರರು ಮತ ಚಲಾಯಿಸಿ, ಕೇಂದ್ರ ಪರಿಷತ್ತಿನ ಅಧ್ಯಕ್ಷರು, 30 ಜಿಲ್ಲಾಧ್ಯಕ್ಷರು ಹಾಗೂ 5 ಗಡಿ ರಾಜ್ಯಗಳ ಅಧ್ಯಕ್ಷರು - ಹೀಗೆ ಒಟ್ಟು 36 ಸ್ಥಾನಗಳಿಗೆ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದೆ. 

2021ರ ಚುನಾವಣೆಯಲ್ಲಿ ಹೊಸದಾಗಿ ಅನುಸರಿಸಿದ ಕ್ರಮಗಳು: ಮತದಾರರ ಅನುಕೂಲಕ್ಕಾಗಿ, ಮತದಾನದ ಪ್ರಮಾಣ ಹೆಚ್ಚಳವಾಗಬೇಕೆಂಬ ಸದುದ್ದೇಶದಿಂದ ಕ.ಸಾ.ಪ. ಇತಿಹಾಸದಲ್ಲಿ ಮೊದಲನೆಯ ಬಾರಿಗೆ ಮೊಬೈಲ್ ಆ್ಯಪ್ Election Kasapa 2021 ರೂಪಿಸಲಾಗಿತ್ತು. ಇದರಿಂದಾಗಿ ಮತದಾರರು ಹಾಗೂ ಅಭ್ಯರ್ಥಿಗಳು ಮತದಾರರ ವಿಳಾಸ / ಮತಗಟ್ಟೆ ವಿವರಗಳನ್ನು ಸುಲಭವಾಗಿ ಹುಡಕುವಂತಾಯಿತು ಹಾಗೂ ಕಸಾಪದ ಅಧಿಕೃತ ವೆಬ್‌ಸೈಟ್ www.kasapa.in ನಲ್ಲಿಯೂ ಹುಡುಕು ಆಯ್ಕೆ (ಸರ್ಚಿಂಗ್) ರೂಪಿಸಿದ್ದು, ವಿವರಗಳನ್ನು ಸುಲಭವಾಗಿ ದೊರಕುವಂತೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೇ ಮೊದಲ ಬಾರಿಗೆ ಮತದಾರರ ಪಟ್ಟಿಯನ್ನು ಸಹ ಕನ್ನಡ ವರ್ಣಮಾಲೆಯ ಅಕ್ಷರಗಳಿಗನುಗುಣವಾಗಿ ಮುದ್ರಿಸಿ ಚುನಾವಣೆಯನ್ನು ನಡೆಸಲಾಗಿದೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...