ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್.‌ ಕೃಷ್ಣಯ್ಯ ಇನ್ನಿಲ್ಲ

Date: 12-08-2022

Location: ಬೆಂಗಳೂರು.


ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್.‌ ಕೃಷ್ಣಯ್ಯ ಅವರು ಆಗಸ್ಟ್‌ 12 ಶುಕ್ರವಾರದಂದು ಮಧ್ಯಾಹ್ನ 1.00 ಗಂಟೆಗೆ ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರ ಆಗಸ್ಟ್‌ 13 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟಿನಲ್ಲಿ ನಡೆಯಲಿದೆ.

ಪ್ರೊ.ಎಂ.ಎಚ್. ಕೃಷ್ಣಯ್ಯ ಅವರು 1937 ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಮೈಸೂರು ವಿವಿಯಿಂದ ಎಂ.ಎ. ಪದವೀಧರರಾದ ಅವರು, ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮೊದಲಾದೆಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ, ಸಂಗೀತ ಮತ್ತು ಕಲೆಯಲ್ಲಿ ಆಸಕ್ತರಾಗಿದ್ದ ಅವರು ಬರೆದಿರುವ ಕೃತಿಗಳು ಮೂವತ್ತಕ್ಕೂ ಹೆಚ್ಚು. ಅವರ ’ಕಲಾ ದರ್ಶನ’ ಕೃತಿ ಮಹತ್ವದ ಪ್ರಕಟಣೆಯಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮೊದಲಾದೆಡೆಗಳಲ್ಲಿ ಅವರು ಸಲ್ಲಿಸಿದ್ದ ಸೇವೆ ಗಣನೀಯ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು. ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಮೊದಲಾದ ಗೌರವಗಳು ಅವರಿಗೆ ಸಂದಿದ್ದವು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...