ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಿದ್ವಾಂಸ ಪ್ರೊ. ಎಂ ಎ ಹೆಗಡೆ ಇನ್ನಿಲ್ಲ

Date: 18-04-2021

Location: ಬೆಂಗಳೂರು


ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ವಿದ್ವಾಂಸ ಹಾಗೂ ಹಿರಿಯ ಯಕ್ಷಗಾನ ಕಲಾವಿದರ ಜೊತೆ ಆನ್ ಲೈನ್ ನಲ್ಲಿ ಮಾತುಕತೆ ನಡೆಸುತ್ತಿದ ‘ಮಾತಿನ ಮಂಟಪ’ ಖ್ಯಾತಿಯ ಪ್ರೊ. ಎಂ ಎ ಹೆಗಡೆ ಅವರು ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ ಕೊರೊನಾ ಸೋಂಕಿನಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.ಇದೇ ಏಪ್ರಿಲ್ 13 ರಂದು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.,

ಮೂಲತಃ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೋಗಿನ್ಯಮನೆಯವರಿದ್ದು, ಸದ್ಯ ಅವರು ಶಿರಸಿಯಲ್ಲಿ ವಾಸವಾಗಿದ್ದು, ಯಕ್ಷಗಾನ ಅಕಾಡೆಮಿಗೆ ಅವರು ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ (1971-73) ಉಪನ್ಯಾಸಕರಾಗಿದ್ದರು. ಸಿದ್ದಾಪುರದ ಮಹಾತ್ಮಾ ಗಾಂಧಿ ಶತಾಬ್ಧಿ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ,ಆ ವಿಭಾಗದ ಮುಖ್ಯಸ್ಥರಾಗಿ (1973-2004) ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು.

ಅವರು ಸ್ವತಃ ಪಾತ್ರಧಾರಿಯಾಗಿ ಯಕ್ಷಗಾನದಲ್ಲಿ ವಿಶೇಷ ಒಲವು ಹೊಂದಿದ್ದರು, ವೇಷಧಾರಿ, ತಾಳಮದ್ದಲೆಯ ಅರ್ಥಧಾರಿ, ಸಂಶೋಧಕ, ವಿಮರ್ಶಕ, ಮತ್ತು ಪ್ರಸಂಗ ಕರ್ತರಾಗಿ ಕೆಲಸ ಮಾಡಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದರ ಪೈಕಿ ಸೀತ ವಿಯೋಗ ,ತ್ರಿಶಂಕು ಚರಿತೆ ,ರಾಜಾ ಕಂದಾಮ ಮುಂತಾದವು ಜನಪ್ರಿಯ ಪ್ರಸಂಗಗಳು. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ರಚಿಸಿದ್ದಾರೆ. 2013ರ ಮಾರ್ಚ್ ತಿಂಗಳಲ್ಲಿ ಶಿರಸಿಯಲ್ಲಿ ನಡೆದ 8ನೇ ಅಖಿಲ ಭಾರತ ಯಕ್ಷಗಾನ-ಬಯಲಾಟ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಗೌರವ ಪಡೆದಿದ್ದರು.

 

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...