ಕರ್ನಾಟಕ ಪತ್ರಕರ್ತೆಯರ ಸಂಘದ ದತ್ತಿ ನಿಧಿ ಪ್ರಶಸ್ತಿ ಪ್ರಕಟ

Date: 19-11-2025

Location: ಬೆಂಗಳೂರು


ಬೆಂಗಳೂರು: ಹಿರಿಯ ಪತ್ರಕರ್ತರಾದ ಸುಶೀಲಾ ಸುಬ್ರಹ್ಮಣ್ಯ ಹಾಗೂ ನೀಳಾ ಎಂ.ಎಚ್ ಅವರನ್ನು ಕರ್ನಾಟಕ ಪತ್ರಕರ್ತೆಯರ ಸಂಘ ತನ್ನ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಸದರನ್ ಎಕಾನಮಿಸ್ಟ್ ಪತ್ರಿಕೆಯ ಸಂಪಾದಕಿ, ಹಿರಿಯ ಪತ್ರಕರ್ತೆ ಸುಶೀಲಾ ಸುಬ್ರಹ್ಮಣ್ಯ ಹಾಗೂ ಪ್ರಜಾವಾಣಿ ದಿನಪತ್ರಿಕೆಯ ಭೂಮಿಕಾ, ಶಿಕ್ಷಣ ಪುರವಣಿಯ ಮುಖ್ಯಸ್ಥೆ ನೀಳಾ ಎಂ.ಎಚ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಪತ್ರಕರ್ತೆಯರ ಸಂಘ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಈ ವರ್ಷದಿಂದ ದತ್ತಿನಿಧಿ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇದೇ ತಿಂಗಳ 28 ರಂದು ಬೆಳಗ್ಗೆ 11 ಗಂಟೆಗೆ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಮತ್ತು ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ ತಿಳಿಸಿದ್ದಾರೆ.

MORE NEWS

`Growing Up karantha' ಕೃತಿಯನ್ನ ನಾನು ಹಠದಿಂದಲೇ ಬರೆದಿದ್ದೇನೆ; ಉಲ್ಲಾಸ್‌ ಕಾರಂತ್

07-12-2025 ಬೆಂಗಳೂರು

ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...

ವಿಭಿನ್ನ ಸಾಹಿತ್ಯಗಳ ವಿಚಾರಧಾರೆಗಳ ಸಮ್ಮಿಲನ 'BLF'

07-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...

ಓದುಗರು ಹೊಸತನದ ಕೃತಿಗಳನ್ನು ಓದಬೇಕು: ಶ್ರೀನಿವಾಸ ಪ್ರಭು

07-12-2025 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...