ಕ.ಸಾ.ಪ ಆಜೀವ ಸದಸ್ಯತ್ವ ನೋಂದಣಿ ಶುಲ್ಕ ಇಳಿಕೆ - ಭರವಸೆ

Date: 02-12-2021

Location: ಬೆಂಗಳೂರು


ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕಾಗಿ ಸಾಕಷ್ಟು ಬೇಡಿಕೆಗಳು ಬರುತ್ತಿದ್ದು, ಸಾಮಾನ್ಯರು ಸಹ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಳ್ಳಬೇಕೆಂಬ ಅಭಿಲಾಷೆಯಿಂದ ಸದಸ್ಯತ್ವ ಶುಲ್ಕವನ್ನು 250 ರೂಪಾಯಿಗೆ ಇಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕಸಾಪ ನೂತನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದ್ದಾರೆ.

ಪ್ರಸ್ತುತ ಆಜೀವ ಸದಸ್ಯತ್ವ ಶುಲ್ಕ 500 ರೂಪಾಯಿಗಳಿದ್ದು, ಮುಂದಿನ ಸಕಲ ಸದಸ್ಯರ ಸಭೆಯಲ್ಲಿ ಸದಸ್ಯತ್ವ ಶುಲ್ಕ ಕಡಿತಗೊಳಿಸುವ ಬಗ್ಗೆ ನಿರ್ಣಯಕೈಗೊಂಡು ಶೀಘ್ರದಲ್ಲೇ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಸದಸ್ಯರು ಸದಸ್ಯತ್ವ ನೋಂದಾಯಿಸಿಕೊಳ್ಳಲು ಸುಲಭವಾಗುವಂತೆ ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಈ ನೂತನ ಕ್ರಮಗಳನ್ನು ಹೊಸ ಆರ್ಥಿಕ ವರ್ಷದಿಂದ ಜಾರಿಗೆ ತರಲಾಗುವುದು. ಸ್ವ ಇಚ್ಛೆಯಿಂದ ಪ್ರಸ್ತುತ 500 ರೂಪಾಯಿಗಳ ಶುಲ್ಕ ನೀಡಿ ಆಜೀವ ಸದಸ್ಯತ್ವ ಪಡೆಯುವುದಾದರೆ ಯಾವುದೇ ರೀತಿಯ ಅಭ್ಯಂತರವಿರುವುದಿಲ್ಲ ಎಂದು ಅವರು ಹೇಳಿದರು. ಅಲ್ಲದೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಒಂದು ಕೋಟಿ ಆಜೀವ ಸದಸ್ಯರನ್ನು ನೋಂದಾಯಿಸುವ ಗುರಿಯನ್ನು ಹೊಂದಿರುವುದಾಗಿ ಅವರು ಹೇಳಿದರು.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...