ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಕೃತಿಗೆ ನಾಗಶ್ರೀ ಕಾವ್ಯ ಪ್ರಶಸ್ತಿ

Date: 03-07-2021

Location: ಬೆಂಗಳೂರು


ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಅವರ 'ಅವನು ಹೆಣ್ಣಾಗಬೇಕು' ಕವನ ಸಂಕಲನಕ್ಕೆ 2021ನೇ ಸಾಲಿನ 'ನಾಗಶ್ರೀ ಕಾವ್ಯ' ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕೊವಿಡ್ ನಿಯಮಾವಳಿ ಅನುಸರಿಸಿ ಸಮಾರಂಭದ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾಗಶ್ರೀ ಪ್ರಶಸ್ತಿ ಸಮಿತಿಯ ಸಂಚಾಲಕಿ ತೇಜಾವತಿ ಹೆಚ್.ಡಿ. ಅವರು ತಿಳಿಸಿದ್ದಾರೆ.

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರೆ. ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವೀಧರೆ.

ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾ ಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ಗ್ರಂಥ ಬಹುಮಾನ ಹಾಗೂ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ 'ಬಸವರಾಜ ಕಟ್ಟೀಮನಿ ಪ್ರಶಸ್ತಿ', 'ಮೂರು ನಾಟಕಗಳು' ಕೃತಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ 'ಅರಳು' ಪ್ರಶಸ್ತಿ; ನಿದ್ರಾನಗರಿ ಮಕ್ಕಳ ನಾಟಕಕ್ಕೆ ಉಡುಪಿ ರಥಬೀದಿ ಗೆಳೆಯರು “ಕೆದ್ಲಾಯ ಸ್ಮಾರಕ ಪ್ರಶಸ್ತಿ' ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಸಂದಿವೆ.

ಪಳಕಳ ಸೀತಾರಾಮ ಭಟ್ಟರ ಸಮಗ್ರ ಕೃತಿಗಳ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ; ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 'ಗುಳಿಯಪ್ಪ' ಮಕ್ಕಳ ನಾಟಕಕ್ಕೆ ಪ್ರಥಮ ಬಹುಮಾನ (2016), 'ಪಗಡೆಹಾಸು' ನಾಟಕಕ್ಕೆ ಕರ್ನಾಟಕ ನಾಟಕ ಅಕಾಡೆಮಿಯ ಬಹುಮಾನ (2017) ಹಾಗೂ ರಾಜ್ಯ ಯುವ ಬರಹಗಾರರ ಒಕ್ಕೂಟದ ಒಂದನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷೆಯ (2018) ಗೌರವ ಲಭಿಸಿದೆ.

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...