ಕವಿ ಬಿ.ಆರ್. ಲಕ್ಷ್ಮಣ್ ರಾವ್ ಗೆ ಸಾಹಿತ್ಯಕಲ್ಪತರು ಪ್ರಶಸ್ತಿ

Date: 25-05-2022

Location: ತುಮಕೂರು


ತುಮಕೂರು ಜಿಲ್ಲೆಯ ತಿಪಟೂರಿನ ಬಯಲುಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘವು 2022ನೇ ಸಾಲಿನಿಂದ ಹಿರಿಯ ಲೇಖಕರಿಗೆ ಸಾಹಿತ್ಯ ಸಾಧನೆಗಾಗಿ ಸಾಹಿತ್ಯ ಕಲ್ಪತರು ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು, ಮೊದಲ ವರ್ಷದ ಪ್ರಶಸ್ತಿಗೆ ನಾಡಿನ ಹಿರಿಯ ಕವಿ ಬಿ.ಆರ್. ಲಕ್ಷ್ಮಣ್ ರಾವ್  ಅವರನ್ನು ಆಯ್ಕೆಮಾಡಲಾಗಿದೆ. ಈ ಪ್ರಶಸ್ತಿಯು ಹತ್ತು ಸಾವಿರ (10,000) ರೂಪಾಯಿಗಳ ನಗದು, ಪ್ರಶಸ್ತಿ ಫಲಕ ಹಾಗೂ ಸನ್ಮಾನವನ್ನು ಒಳಗೊಂಡಿದೆ. ತಿಪಟೂರು ನಗರದ ಶ್ರೀ ಸತ್ಯ ಗಣಪತಿ ಅಮೃತ ಮಹೋತ್ಸವ ಭವನದಲ್ಲಿ ದಿನಾಂಕ : 04.06.2022 ರ ಶನಿವಾರ ಸಂಜೆ 4 ಗಂಟೆಗೆ ಆಯೋಜಿಸಲಾದ  ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಕವಿ ಬಿ.ಆರ್. ಲಕ್ಷ್ಮಣ್ ರಾವ್  ಅವರಿಗೆ ಈ ಪ್ರಶಸ್ತಿಯನ್ನು ಪ್ರಧಾನಮಾಡಿ ಗೌರವಿಸಲಾಗುವುದು. ಈ ಸಮಾರಂಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್, ಮಾಜಿ ಶಾಸಕರಾದ ಕೆ. ಷಡಕ್ಷರಿ, ಹಿರಿಯ ಪತ್ರರ‍್ತರಾದ ವೆಂಕಟ ನಾರಾಯಣ್, ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಬಾನು ಪ್ರಶಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...