Date: 28-11-2025
Location: ಬೆಂಗಳೂರು
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವು ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಸಿದ್ಧ ಕೊಂಕಣಿ ಬರಹಗಾರ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಮಹಾಬಳೇಶ್ವರ ಸೈಲ್ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ :
ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 29 ರಂದು ಬೆಳಿಗ್ಗೆ 10:30 ಗಂಟೆಗೆ ಕುವೆಂಪು ಅವರ ಜನ್ಮಸ್ಥಳವಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮಹಾಬಳೇಶ್ವರ ಸೈಲ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಕುವೆಂಪು ರಾಷ್ಟ್ರೀಯ ಪುರಸ್ಕಾರವು 5 ಲಕ್ಷ ರೂ. ನಗದು, ಬೆಳ್ಳಿ ಪದಕ, ಪ್ರಶಸ್ತಿ ಪತ್ರ ಹಾಗೂ ಫಲ ತಾಂಬೂಲವನ್ನು ಒಳಗೊಂಡಿರುತ್ತದೆ.
ಆಯ್ಕೆ ಸಮಿತಿ:
ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಯು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯಲ್ಲಿ ಕೊಂಕಣಿ ಭಾಷಾ ಸಾಹಿತಿ ಶಾ. ಮಂ. ಕೃಷ್ಣರಾಯ, ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮನೆ ಅವರು ಸದಸ್ಯರಾಗಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಸಮಿತಿಯ ಸಂಚಾಲಕರಾಗಿದ್ದರು.
ಪ್ರಶಸ್ತಿ ಪುರಸ್ಕೃತರ ಕಿರು ಪರಿಚಯ :
ಜನನ: ಮಹಾಬಳೇಶ್ವರ ಸೈಲ್ ಅವರು 1943 ರ ಆಗಸ್ಟ್ 4 ರಂದು ಉತ್ತರ ಕನ್ನಡ ಜಿಲ್ಲೆಯ ಮಜಾಲಿ ಪ್ರದೇಶದ ಶೆಜೆಬಾಗ್ ಗ್ರಾಮದಲ್ಲಿ ಜನಿಸಿದರು.
ವಿದ್ಯಾಭ್ಯಾಸ ಮತ್ತು ಸೇವೆ: 8ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ನಿಲ್ಲಿಸಿದ ನಂತರ ಇವರು ಭಾರತೀಯ ಸೇನೆಗೆ ಸೇರಿದರು. ಇವರು 1965 ರ ಪಾಕಿಸ್ತಾನ ಯುದ್ಧದಲ್ಲಿ ಭಾಗವಹಿಸಿದ್ದರು. ಅಲ್ಲದೇ, ಇಸ್ರೇಲ್ ಮತ್ತು ಈಜಿಪ್ಟ್ ನಡುವಿನ ಗಡಿಯಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡಿಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಸೇನಾ ನಿವೃತ್ತಿಯ ಬಳಿಕ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು.
ಸಾಹಿತ್ಯ ಕೊಡುಗೆ: ಸೈಲ್ ಅವರು ಕೊಂಕಣಿ ಮತ್ತು ಮರಾಠಿ ಭಾಷೆಗಳಲ್ಲಿ ಹಲವು ಕೃತಿಗಳನ್ನು ರಚಿಸಿರುವ ದ್ವಿಭಾಷಾ ಲೇಖಕರು ಮತ್ತು ಪ್ರಖ್ಯಾತ ಅನುವಾದಕರು.
ಪ್ರಮುಖ ಪುರಸ್ಕಾರಗಳು: ಇವರು ಈಗಾಗಲೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ 'ಹಾವಟಣ್' ಕಾದಂಬರಿಗಾಗಿ ಅವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿಯೂ ಲಭಿಸಿದೆ.
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...
ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...
©2025 Book Brahma Private Limited.