ಖ್ಯಾತ ಲೇಖಕಿ, ಸಾಹಿತಿ ಶಾಂತಾದೇವಿ ಕಣವಿ ಇನ್ನಿಲ್ಲ

Date: 22-05-2020

Location: ಬೆಳಗಾವಿ


ಖ್ಯಾತ ಲೇಖಕಿ, ಸಾಹಿತಿ ಶಾಂತಾದೇವಿ ಕಣವಿ ಅವರು ಇಂದು ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಧಾರವಾಡದಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಖ್ಯಾತ ಕವಿ ಚನ್ನವೀರ ಕಣವಿ ಅವರ ಪತ್ನಿ ಶಾಂತಾದೇವಿ ಕಣವಿ ಅವರು ಸಾಹಿತ್ಯ ಕ್ಷೇತ್ರದಲ್ಲೀ ತಮ್ಮದೇ ಆದ ಛಾಪು ಮೂಡಿಸಿದ್ದರು.ಕಥೆ, ಕಾದಂಬರಿ, ಲೇಖನಗಳ ಮೂಲಕ ಉತ್ತರ ಕರ್ನಾಟಕದ ಭಾಷೆಯ ಸೊಗಡನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಹೆಗ್ಗಳಿಕೆ ಅವರದ್ದು. 

ಸಂಜೆ ಮಲ್ಲಿಗೆ (ಕವನ ಸಂಕಲನ), ಬಯಲು ಆಲಯ, ನಿಜಗುಣ ಶಿವಯೋಗಿ (ಜೀವನ ಚರಿತ್ರೆ, ಮರು ವಿಚಾರ (ಹರಟೆ),  ಜಾತ್ರೆ ಮುಗಿದಿತ್ತು (ಸಣ್ಣಕತೆ), ಅಜಗಜಾಂತರ (ಲಲಿತ ಪ್ರಬಂಧ), ಕಳಚಿ ಬಿದ್ದ ಪಂಜರ, ಪ್ರಶಾಂತ (ಸಂಪಾದನೆ), ನೀಲಿಮಾ ತೀರ (ಸಣ್ಣಕತೆ) ಕೃತಿಗಳನ್ನು ರಚಿಸಿದ್ದಾರೆ. ಬಯಲು ಆಲಯ ಕೃತಿಗೆ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿದೆ. ಶಾಂತಾದೇವಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (1987) ಹಾಗೂ 2009ರ ರಾಜ್ಯ ಸರ್ಕಾರದ ದಾನ ಚಿಂತಾಮಣಿ ಪ್ರಶಸ್ತಿ ಲಭಿಸಿದ್ದವು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...