ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

Date: 28-03-2024

Location: ಬೆಂಗಳೂರು


ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರಶಸ್ತಿಗೆ ರಂಗ ನಿರ್ದೇಶಕ ಶ್ರೀಪಾದ ಭಟ್‌ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯನ್ನು ಧಾರವಾಡದ ಗೋ.ವಾ. ರಂಗ-ಸಂಗ, ಆಟ-ಮಾಟ ಹಾಗೂ ಬೆಂಗಳೂರಿನ ಬಹುರೂಪಿ ಫೌಂಡೇಶನ್ ಸಂಸ್ಥೆಗಳು ಸ್ಥಾಪಿಸಿದ್ದು, ಮಾರ್ಚ್ 30ರಂದು ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದ ಶ್ರೀಪಾದ ಭಟ್ ಅವರು ಕನ್ನಡ ರಂಗಭೂಮಿಯಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಗಾಂಧಿ-150ರ ಸಂದರ್ಭದಲ್ಲಿ ಇವರು ನಿರ್ದೇಶಿಸಿದ 'ಪಾಪು-ಬಾಪು' ನಾಟಕವು 2 ಸಾವಿರ ಪ್ರಯೋಗ ಕಂಡಿದೆ. ಇದುವರೆಗೂ ಸುಮಾರು 150ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. 'ದಡವ ನೆಕ್ಕಿದ ಹೊಳೆ' ನಟನೆಯ ಕೈಪಿಡಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...