‘ಲ್ಯಾಂಡ್, ಲಸ್ಟ್, ಅಂಡ್ ಆಡಿಯೋ ಟೇಪ್’  ಹಾಗೂ 'ನಗ್ನಸತ್ಯ' ಕೃತಿಗಳ ಲೋಕಾರ್ಪಣೆ..

Date: 02-10-2021

Location: ಬೆಂಗಳೂರು


ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಡಿ.ಕೆ ರವಿ ಅವರ ಸಾವಿನ ಕುರಿತಾಗಿ ಲ್ಯಾಂಡ್, ಲಸ್ಟ್, ಅಂಡ್ ಆಡಿಯೋ ಟೇಪ್ ಎಂಬ ಇಂಗ್ಲಿಷ್ ಭಾಷೆಯಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ಪ್ರಹ್ಲಾದ್ ರಾವ್ ಅವರು 'ನಗ್ನಸತ್ಯ' ಹೆಸರಿನಲ್ಲಿ ಕನ್ನಡಕ್ಕೆ ಭಾಷಾಂತರಿಸಿದ್ದಾರೆ. ಈ ಎರಡೂ ಪುಸ್ತಕಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಏಕಕಾಲದಲ್ಲಿ ಲೋಕಾರ್ಪಣೆಗೊಳಿಸಿದರು.

ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು, ಡಿ.ಕೆ ರವಿ ಅವರ ಆತ್ಮಹತ್ಯೆಗೆ ಕಾರಣಗಳೇನು ಎಂಬ ಬಗ್ಗೆ ಹಲವಾರು ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ಈ ಪುಸ್ತಕದ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸ ಮಾಡಿದ್ದಾರೆ.

ಡಿ.ಕೆ ರವಿ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಬಗ್ಗೆ ಎರಡು ಮಾತಿಲ್ಲ. ಇದರ ಜೊತೆಗೆ ಪ್ರಚಾರ ಪ್ರಿಯರು ಆಗಿದ್ದರು. ಮರಳು ಮತ್ತು ಭೂ ಮಾಫಿಯಾ ವಿರುದ್ಧ ಪ್ರತಿ ಬಾರಿ ಕ್ರಮಕೈಗೊಳ್ಳುವ ಮುಂಚೆ ಮೀಡಿಯಾಗಳಿಗೆ ಮೊದಲು ತಿಳಿಸಿ, ನಂತರ ಕ್ರಮ ಜರುಗಿಸುತ್ತಿದ್ದರು. ಈ ಮೂಲಕ ಬಹುಬೇಗ ಜನಪ್ರಿಯತೆ ಗಳಿಸುವ ಪ್ರಯತ್ನ ಮಾಡಿದ್ದರು ಎಂಬುದನ್ನು ರಾಮಕೃಷ್ಣ ಉಪಾಧ್ಯ ಅವರ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...