ಲೇಖಕ ಗೋವಿಂದ ಪ್ರಹ್ಲಾದ ಭಾಗೋಜಿ ನಿಧನ

Date: 26-09-2020

Location: ಬೆಳಗಾವಿ


ಲೇಖಕ ಗೋವಿಂದ ಪ್ರಹ್ಲಾದ (88) ಅವರು ಬುಧವಾರ (23 ಸೆಪ್ಟಂಬರ್)ರಂದು ಬೆಳಗಾವಿಯಲ್ಲಿ ನಿಧನ ಹೊಂದಿದ್ದಾರೆ. ಸಾಹಿತ್ಯದಲ್ಲಿ ಕೃಷಿ ಮಾಡಿರುವ ಅವರು ವೃತ್ತಿಯಿಂದ ಪಶುವೈದ್ಯರು. ಪಶು ಸಂಗೋಪನ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಖ್ಯಾತರೂ ಆಗಿದ್ದ ಅವರು 1956ರಲ್ಲಿ ಪಶು ವೈದ್ಯಕೀಯ ಶಿಕ್ಷಣವನ್ನು ಬಾಂಬೆ ವಿಶ್ವ ವಿದ್ಯಾಲಯದಿಂದ ಮುಗಿಸಿ ಮಹಾರಾಷ್ಟ್ರ ಮತ್ತು ಗುಜರಾತ ರಾಜ್ಯಗಳಲ್ಲಿ ಸೇವೆ ಸಲ್ಲಿಸಿದರು.

ಅವರ "ಪಶು ಸಂಗೋಪನ ಬೆಳವಣಿಗೆ ಮತ್ತು ಅಭಿವೃದ್ಧಿ (LIVE STOCK PRODUCTION)" ಸಂಶೋಧನಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದರು. ಪಶು ಸಂಗೋಪನೆಗೆ ಸಂಬಂಧಿಸಿದಂತೆ ಹಲವಾರು ಲೇಖನಗಳನ್ನು ರಚಿಸಿದ್ದರು. ಮಹಾರಾಷ್ಟ್ರದಲ್ಲಿ ನಾಲ್ಕು ವರ್ಷಗಳ ಕಾಲ ಕಾರ್ಯ ನಿರ್ವಹಿಸಿ 32ವರ್ಷಗಳ ಸುಧೀರ್ಘ ಕಾಲ ಗುಜರಾತ್‌ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರ ಆತ್ಮಕಥನ ‘ಎಲ್ಲಿಗೆ ಅನ್ನದೆ ನಡೆ’. ನಿವೃತ್ತಿಯ ನಂತರ ಬೆಳಗಾವಿಯಲ್ಲಿ ಅವರು ವಿಶ್ರಾಂತ ಜೀವನ ನಡೆಸುತ್ತಿದ್ದರು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...