“ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ ಕೌಶಲ” ಐದು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

Date: 06-04-2021

Location: ಬೆಂಗಳೂರು


ಕರ್ನಾಟಕ ಸಾಹಿತ್ಯ ಅಕಾಡಮಿ ‘ವಿಶೇಷ ಘಟಕ ಯೋಜನೆಯಡಿ ಐದು ದಿನಗಳ “ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ ಕೌಶಲ” ಕಮ್ಮಟಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಹಲವು ನಿಬಂಧನೆಗಳಿದ್ದು, ‘ಪರಿಶಿಷ್ಟ ಜಾತಿಗೆ ಸೇರಿದ 20ರಿಂದ 50ರ ವಯೋಮಿತಿಯಲ್ಲಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಮಾಧ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ದಿನಗಳು ಶಿಬಿರದಲ್ಲೇ ವಾಸ್ತವ್ಯ ಮಾಡಬೇಕು. ಅಗತ್ಯವಿರುವ ಉಡುಪುಗಳು, ಹಾಸಲು ಮತ್ತು ಹೊದಿಕೆಗಳನ್ನು ತರುವುದು. ಹಾಗೂ ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲ್ಭಾಗದಲ್ಲಿ ಕಡ್ಡಾಯವಾಗಿ “ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ ಕೌಶಲ” ಶಿಬಿರಕ್ಕೆ ಅರ್ಜಿ ಎಂದು ನಮೂದಿಸಿರಬೇಕು ಎಂದು ತಿಳಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಬಿರದ ಸ್ಥಳಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ / ಸಾಮಾನ್ಯ ರೈಲ್ವೆ ದರವನ್ನು ನೀಡಲಾಗುವುದು. ಹಾಗೂ ಐದು ದಿನಗಳು ಉಟೋಪಹಾರ / ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಜೊತೆಗೆ ಅಕಾಡೆಮಿ ನಿಯಮಾನುಸಾರ ಆಯ್ಕೆಯಾಗಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಪ್ರಯಾಣಭತ್ಯೆಯನ್ನು ಕಾರ್ಯಕ್ರಮ ಮುಗಿದ ನಂತರ ಬ್ಯಾಂಕ್ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ಪಾವತಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‍ಸೈಟ್ ನಿಂದ ಪಡೆದುಕೊಳ್ಳಬಹುದಾಗಿದ್ದು ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು 2021 ಏಪ್ರಿಲ್ 30 ಕೊನೆಯ ದಿನಾಂಕವಾಗಿದೆ. ಆಸಕ್ತರು ಭಾಗಿಯಾಗಿ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ:

MORE NEWS

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...