ಮೆಹಬೂಬ ಮಠದ ಅವರಿಗೆ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ

Date: 03-12-2021

Location: ಬೆಂಗಳೂರು


ಕೊಪ್ಪಳದ ಯುವ ಕವಿ ಮೆಹಬೂಬ ಮಠದ ಅವರ ಚೊಚ್ಚಲ‌ ಕವನ ಸಂಕಲನ "ಬಿಸಿಲು ಕಾಡುವ ಪರಿ" ಯು ಬೆಳಗಾವಿಯ ಬಿ. ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 5000 ರೂಪಾಯಿ ನಗದು, ಸ್ಮರಣಿಗೆ, ಪ್ರಮಾಣ ಪತ್ರ ಹಾಗೂ ಗೌರವ ಸನ್ಮಾನವನ್ನು ಒಳಗೊಂಡಿದೆ.

ಹೊಸ ತಲೆಮಾರಿನ ಭರವಸೆಯ ಕವಿ ಎಂದು ವಿಮರ್ಶಕರು ಗುರುತಿಸಿರುವ ಮೆಹಬೂಬ ಮಠದ ಅವರು ಮಾನವೀಯ ಕಾಳಜಿಯ ಆತ್ಯಂತಿಕ ನೆಲೆಯನ್ನು ಕಾವ್ಯದ ಜೀವಾಳವಾಗಿಸಿಕೊಂಡಿದ್ದಾರೆ.

ಡಿ. 12ರಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಠದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಎಂ. ವಾಯ್. ಮೆಣಸಿನಕಾಯಿ ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.

ಮೆಹಬೂಬ ಮಠದ ಅವರ ಪರಿಚಯಕ್ಕಾಗಿ ಇಲ್ಲಿ ಕ್ಲಿಕ್ಕಿಸಿ..

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...