‘ಮುಂಜಾವಿನ ಮೌನ’ ಕಾದಂಬರಿ ಲೋಕಾರ್ಪಣೆ

Date: 01-11-2019

Location: ಬೆಂಗಳೂರು


ಭಾರತ್ ವಿದ್ಯಾ ಸಂಸ್ಥೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಸ್. ರವೀಶ್ ಅವರ 3ನೇ ಕಾದಂಬರಿ ‘ಮುಂಜಾವಿನ ಮೌನ’ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಹಿ.ಚಿ. ಬೋರಲಿಂಗಯ್ಯರವರಿಂದ ಲೋಕಾರ್ಪಣೆಗೊಂಡಿತು. ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಹಿ.ಚಿ. ಬೋರಲಿಂಗಯ್ಯರವರು ಕನ್ನಡಿಗರು ಸ್ವಾಭಿಮಾನವನ್ನು ಕಾಯ್ದುಕೊಳ್ಳಲೇಬೇಕಾದ ಅನಿವಾರ್ಯತೆಯನ್ನು ಎಳೆಎಳೆಯಾಗಿ ವಿಶ್ಲೇಷಿಸಿದರು.

ವಿಮರ್ಶಕರಾದ ಬೈರಮಂಗಲ ರಾಮೇಗೌಡರವರು ಮಾತನಾಡಿ ಯುವ ಜನತೆಯಲ್ಲಿ ಕ್ಷೀಣಿಸುತ್ತಿರುವ ಭಾಷಾಭಿಮಾನದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾದಂಬರಿಯ ಕುರಿತು ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕರಾದ ಎಸ್. ಹೆಚ್. ಭುವನೇಶ್ವರ ಮಾತನಾಡಿದರು. ಲೇಖಕ ಎಸ್. ರವೀಶ್, ಭಾರತ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಖ್ಯಾತ ಸಂಗೀತಗಾರರಾದ ಆನಂದ ಮಾದಲಗೆರೆಯವರ ಸಂಗೀತ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...