’ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಕೃತಿಗಳ ಆಹ್ವಾನ

Date: 11-12-2019

Location: ಮುಸ್ಲಿಂ ಲೇಖಕರ ಸಂಘ, ಬೀಬಿ ಅಲಾಬಿ ರಸ್ತೆ, ಮಂಗಳೂರು


ಕನ್ನಡ ಸಾಹಿತ್ಯಕ್ಕೆ ಮುಸ್ಲಿಂ ಬರಹಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಪ್ರಕಟಿಸುವ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ'ಯನ್ನು ನೀಡುತ್ತಾ ಬಂದಿದ್ದು, 2018ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.

ಆಸಕ್ತ ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2018ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು 2020 ರ ಜನವರಿ 31ರ ಒಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001, (ದೂ: 9845054191, 0824 2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸುವುದಿಲ್ಲ ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...