ನಾಳೆಯಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಕ್ಷರ ಜಾತ್ರೆ

Date: 05-01-2023

Location: ಬೆಂಗಳೂರು


86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಹಾವೇರಿ ಸಜ್ಜಾಗಿದೆ. ಮೂರು ವರ್ಷಗಳ ನಂತರ ನಡೆಯುತ್ತಿರುವ ಮೂರು  ನುಡಿ ಹಬ್ಬಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ.

ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನ ಬಳಿಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ನಿರ್ಮಿಸಲಾಗಿದೆ. 

ಕನಕ-ಷರೀಫ-ಸರ್ವಜ್ಞ ಎಂಬ ಮೂರು ಪ್ರಧಾನ ವೇದಿಕೆಗಳಿವೆ. ಡಾ.ವಿ.ಕೃ.ಗೋಕಾಕ ಮಹಾ ಮಂಟಪ, ಹುತಾತ್ಮ ಮಹದೇವ ಮೈಲಾರ ಮಹಾದ್ವಾರದಲ್ಲಿ ಧ್ವಜಾರೋಹಣ ನಡೆಯಲಿದೆ.ಸಮ್ಮೇಳನಾಧ್ಯಕ್ಷ ಪದ್ಮಶ್ರೀ ಡಾ. ದೊಡ್ಡರಂಗೇಗೌಡರನ್ನು ಮೆರವಣಿಗೆ ಮೂಲಕ ಸಮ್ಮೇಳನ ಸ್ಥಳಕ್ಕೆ ಬರಮಾಡಿಕೊಳ್ಳಲಾಗುವುದು.  

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂತರ ಬೆಳಗ್ಗೆ 10.30ಕ್ಕೆ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂರು ವೇದಿಕೆಗಳಲ್ಲಿ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ವಿಶೇಷ ಉಪನ್ಯಾಸ, ಗೋಷ್ಠಿಗಳು ನಡೆಯಲಿವೆ. ವಿವಿಧ ಪ್ರಕಾಶನಗಳು, ಪ್ರಕಾಶಕರು, ಲೇಖಕರು ಹಾಗೂ ಪುಸ್ತಕ ಪ್ರೇಮಿಗಳಿಗಾಗಿ ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ.




 

MORE NEWS

ಭಾರತ ಅಖಂಡವಾಗಿ ಉಳಿಯಲಿ- ಎಚ್‌ಎಸ್‌ವಿ ಆಶಯ

07-02-2020 ಕಲಬುರಗಿ

ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ) ಭಾರತವನ್ನು ಎರಡಾಗಿ ಒಡೆಯದೆ ಅಖಂಡವಾಗಿ ಉಳಿಸುವುದು ಎಲ್ಲರ ಕರ್ತವ್ಯ ಎಂದು ಸಮ...

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

06-02-2020 ಕಲಬುರಗಿ

ಕಲಬುರಗಿ: ಹಾವೇರಿಯಲ್ಲಿ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸ...

ಶಾಸ್ತ್ರೀಯ ಸ್ಥಾನಮಾನ ಅನುಷ್ಠಾನ ನಿರ್ವಹಣೆಗೆ ಸಂಸ್ಥೆ- ಶೆಟ್ಟರ್ ಆಗ್ರಹ

06-02-2020 ಕಲಬುರಗಿ

ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ): ಕನ್ನಡಕ್ಕೆ ಬಹುಬೇಡಿಕೆಯ ಶಾಸ್ತ್ರೀಯ ಸ್ಥಾನಮಾನ ದೊರೆತರೂ ಅದರ ಅನುಷ್ಠಾನ ಹಾ...