Date: 10-06-2024
Location: ಬೆಂಗಳೂರು
ಬೆಂಗಳೂರು; ಕನ್ನಡ ಜನಶಕ್ತಿ ಕೇಂದ್ರದಿಂದ ನಾಲ್ವಡಿ ಶ್ರಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ನಯನ ಸಭಾಂಗಣದಲ್ಲಿ 2024 ಜೂನ್ 10ರ ಸೋಮವಾರದಂದು ನಡೆಯಿತು.
ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಾ. ಶಿವರಾಜ್ ವಿ. ಪಾಟೀಲ ಅವರು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಪ್ರಶಸ್ತಿ ಪುರಸ್ಕೃತ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಮಾತನಾಡಿ, "ಪುಸ್ತಕ ಬರೆದದ್ದು ನಾನು ಅನ್ನುವುದು ನಿಜ. ಆದರೆ ಈ ಪುಸ್ತಕವನ್ನು ಮುಂದಿಟ್ಟುಕೊಂಡು, ಸಂವಿಧಾನ ಓದುವ ಅಭಿಯಾನವನ್ನು ಇಡೀ ರಾಜ್ಯದಲ್ಲಿ ಮಾಡಿದಂತಹ ಕೀರ್ತಿ ನನ್ನದ್ದಲ್ಲ. ಈ ಅಭಿಯಾನದ ಹಿಂದೆ ಅನೇಕ ಜನರು ದುಡಿದಿದ್ದಾರೆ, ಶ್ರಮಪಟ್ಟಿದ್ದಾರೆ. ರಾಜ್ಯದ ಉದ್ದಕ್ಕೂ ನನ್ನನ್ನು ಕರೆಸಿದ್ದಾರೆ. ಅವರ ಎಲ್ಲರ ಕಾಯಕದ ಪರಿಶ್ರಮದ ಫಲಿತವಾಗಿ ಸಂವಿಧಾನ ಓದು ಅಭಿಯಾನ ಕಳೆದ 5 ವರ್ಷಗಳಿಂದ ಮುಂದುವರಿದಿದೆ, ಈಗಲೂ ಮುಂದುವರಿದಿದೆ. ನನ್ನನ್ನು ಪ್ರೋತ್ಸಾಹಿಸಿದ ಎಲ್ಲಾ ಬಳಗಕ್ಕೆ ಈ ಪ್ರಶಸ್ತಿಯನ್ನು ನಾನು ಅರ್ಪಿಸುತ್ತೇನೆ," ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ರಾಜಪ್ಪ ದಳವಾಯಿ ಅವರು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ಶ್ರೀ ಮಲ್ಲಿಕಾರ್ಜುನಪ್ಪ ಅವರು ಉಪಸ್ಥಿತರಿದ್ದರು.
ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷರಾದ ಸಿ.ಕೆ ರಾಮೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.