ನಿತ್ಯೋತ್ಸವ ಕವಿ  ನಿಸಾರ್‌ ಅಹಮದ್‌ ಇನ್ನಿಲ್ಲ

Date: 03-05-2020

Location: ಬೆಂಗಳೂರು


ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್‌ ಅಹಮದ್‌ (84) ಭಾನುವಾರ ಮಧ್ಯಾಹ್ನ ನಿಧನರಾದರು. 

ಭಾವಗೀತೆಗಳ ಮೊದಲ ಕನ್ನಡ ಧ್ವನಿಸುರುಳಿ ‘ನಿತ್ಯೋತ್ಸವ’ ಹಾಗೂ ಅದರ ಕವಿ ಕೆ.ಎಸ್. ನಿಸಾರ್ ಅಹಮದ್ ಅವರು ಕವಿತೆ, ವಿಮರ್ಶೆ, ಅನುವಾದದ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದರು. ಭೂವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ಮೈಸೂರು ಸರ್ಕಾರದ ಭೂವಿಜ್ಞಾನ ಇಲಾಖೆಯಲ್ಲಿ ಒಂದಿಷ್ಟು ಕಾಲ ಸೇವೆ ಸಲ್ಲಿಸಿದ್ದರು. ಅನಂತರ ಕಾಲೇಜು ಪ್ರಾಧ್ಯಾಪಕರಾಗಿ 1994ರಲ್ಲಿ ನಿವೃತ್ತರಾಗಿದ್ದರು. 

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ (1984-87 ಆಗಿದ್ದರು.  ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಗೊರೂರು ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ‘ಹೆಜ್ಚೆಗುರುತು’ ಕೃತಿಗೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ಹೀಗೆ ಹತ್ತಾರು ಪ್ರಶಸ್ತಿಗಳು ಇವರಿಗೆ ಸಂದಿದೆ. 

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...