Date: 28-10-2025
Location: ಬೆಂಗಳೂರು
ಬೆಂಗಳೂರು: ನವೆಂಬರ್ 1 ರಿಂದ ಡಿಸೆಂಬರ್ 7ರವರೆಗೆ ರಾಷ್ಟ್ರೋತ್ಥಾನ ಸಾಹಿತ್ಯ ವತಿಯಿಂದ ಚಾಮರಾಜಪೇಟೆಯ ಕೇಶಲಶಿಲ್ಪ ಸಭಾಂಗಣದಲ್ಲಿ `ಕನ್ನಡ ಪುಸ್ತಕ ಹಬ್ಬ'ವನ್ನು ಹಮ್ಮಿಕೊಳ್ಳಲಾಗಿದೆ.
37 ದಿನಗಳ ಐದನೇ ಪುಸ್ತಕ ಹಬ್ಬದಲ್ಲಿ 40ರಿಂದ 50 ಸಾವಿರ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಇರಲಿದೆ. ರಾಷ್ಟ್ರೋತ್ಥಾನ ಸಾಹಿತ್ಯವಲ್ಲದೇ ಇತರೆ ಪ್ರಕಾಶನಗಳ ಪುಸ್ತಕಗಳು ಪ್ರದರ್ಶನದಲ್ಲಿ ಸಿಗಲಿವೆ. ಪುಸ್ತಕ ಹಬ್ಬದ ಸಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಚರ್ಚಾಸ್ಪರ್ಧೆ, ಶಾಲಾ ವಿದ್ಯಾರ್ಥಿಗಳಿಗಾಗಿ ಪುಸ್ತಕ ಪರಿಚಯ ಮತ್ತು ಲೇಖನ ಸ್ಪರ್ಧೆಗಳನ್ನು ಯೋಜಿಸಲಾಗಿದೆ ಎಂದು ರಾಷ್ಟ್ರೋತ್ಥಾನ ಸಾಹಿತ್ಯ ವಿಶ್ವಸ್ಥ ಕೆ.ಎಸ್.ನಾರಾಯಣ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...
ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...
©2025 Book Brahma Private Limited.