ಪ್ರಗತಿಪರ ಸಾಹಿತಿ ಡಾ. ಜಿ. ಭಾಸ್ಕರ ಮಯ್ಯ ಇನ್ನಿಲ್ಲ,

Date: 06-05-2021

Location: ‌ಉಡುಪಿ


ವೈಚಾರಿಕ ಹಾಗೂ ಪ್ರಗತಿಪರ ಸಾಹಿತಿ ಎಂದೇ ಗುರುತಿಸಿಕೊಂಡಿದ್ದ ಡಾ. ಜಿ. ಭಾಸ್ಕರ ಮಯ್ಯ ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದು, ವೈಚಾರಿಕ ಸಾಹಿತ್ಯದ ಕೊಂಡಿ ಕಳಚಿದಂತಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ವೈಚಾರಿಕ ಸಾಹಿತಿ ಡಾ.ಜಿ.ಭಾಸ್ಕರ್ ಮಯ್ಯ ಅವರು ಉಡುಪಿ ಬಳಿಯ ಬ್ರಹ್ಮಾವರದವರು. ಅವರಿಗೆ 70 ವರ್ಷ (ಜನನ: 1952) ವಯಸ್ಸಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಅವರು ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪ್ರಣವ ಆಸ್ಪತ್ರೆಗೆ ದಾಖಲಾಗಿದ್ದು, ಕೊವಿಡ್ ಪರಿಣಾಮ ಎಂದು ಗುರುತಿಸಲಾಗಿತ್ತು. ಆದರೆ, ಅವರು ಗುರುವಾರ ಬೆಳಗ್ಗೆ 4:30ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಪ್ರಭುತ್ವ ಮೆರೆದಿದ್ದ ಅವರ ವೈಚಾರಿಕ ಕೃತಿಗೆ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.ಶಂಬಾ. ಆಧುನಿಕ್ ಸಾಹಿತ್ಯ ಔರ್ ಪ್ರಯಾಗ್ವಾದ, ಬಹುರಾಷ್ಟ್ರೀಯ ಆರ್ಥಿಕತೆಯ ಪರಿಣಾಮಗಳು, ಜೈನ ದರ್ಶನ, ಸೇರಿದಂತೆ ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದರು. ಆ ಪೈಕಿ 20 ಹಿಂದಿ ಕೃತಿಗಳಾಗಿವೆ. ಅವರಿಗೆ ಕರ್ನಾಟ ಮಹಾ ವಿಚಾರ ರತ್ನ ಗೌರವ ಸಂದಿತ್ತು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...