ಪ್ರಥಮವಾಗಿ ಮುದ್ರಣಗೊಂಡ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

Date: 10-07-2020

Location: ಕೊಪ್ಪಳ


ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರಥಮವಾಗಿ ಮುದ್ರಣಗೊಂಡ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ (2020ರ ಜನವರಿ.01 ರಿಂದ ಜೂನ್.30 ರೊಳಗೆ ಪ್ರಕಟಿತ) ಪುಸ್ತಕಗಳಾದ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಮೊದಲನೇ ಹಂತದಲ್ಲಿ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಿದ್ದು, ಜಿಲ್ಲೆಯ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ. 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಕೊಪ್ಪಳ ವಿಳಾಸಕ್ಕೆ ಸಂಪರ್ಕಿಸಬೇಕು ಎಂದು ಮುಖ್ಯ ಗ್ರಂಥಾಲಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...