2018ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Date: 09-11-2019

Location: ಬೆಂಗಳೂರು


ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2018ನೆಯ ವರ್ಷದ ಪುಸ್ತಕ  ಬಹುಮಾನ ಯೋಜನೆಗಾಗಿ ಈಗಾಗಲೇ ದಿನಾಂಕ 13-06-2019ರಿಂದ 10-07-2019ರವರೆಗೆ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿತ್ತು. ಪುಸ್ತಕಗಳನ್ನು ಸಲ್ಲಿಸದೇ ಇರುವವರಿಗಾಗಗಿ ಮತ್ತೊಮ್ಮೆ 2018ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಪುಸ್ತಕಗಳನ್ನು ಸಲ್ಲಿಸಲು ದಿನಾಂಕ- 30-11-2019ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಈಗಾಗಲೇ ಸಲ್ಲಿಸಿರುವವರು ಮತ್ತೆ ಸಲ್ಲಿಸುವ ಅಗತ್ಯವಿಲ್ಲ. 

ಪ್ರತೀ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು. 2018ರ ಜನವರಿ 1ರಿಂದ 2018ರ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು. ಆಸಕ್ತರು ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ. ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು- 560002 ಇವರಿಗೆ ರಿಜಿಸ್ಟಡ್ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2019ರ ನವೆಂಬರ್ 30ರೊಳಗೆ ತಲುಪಿಸಬೇಕಾಗಿ ಕೋರಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...