ರಹಮತ್ ತರೀಕೆರೆ, ಬಾ.ಹ ರಮಾಕುಮಾರಿ ಅವರಿಗೆ ಸಣ್ಣ ಗುಡ್ಡಯ್ಯ ಸಾಹಿತ್ಯ ಪ್ರಶಸ್ತಿ

Date: 17-01-2024

Location: ಬೆಂಗಳೂರು


ಲೇಖಕ ಪ್ರೊ. ರಹಮತ್ ತರೀಕೆರೆ ಹಾಗೂ ಲೇಖಕಿ ಬಾ.ಹ ರಮಾಕುಮಾರಿ ಅವರಿಗೆ ತುಮಕೂರಿನ ಪ್ರೊ. ಎಚ್.ಜಿ. ಸಣ್ಣ ಗುಡ್ದಯ್ಯ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿ ಲಭಿಸಿದೆ. 

ಸಣ್ಣಗುಡ್ಡಯ್ಯ ಪ್ರತಿಷ್ಠಾನವು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕಳೆದ ಎರಡು ವರ್ಷಗಳಿಂದ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ಈ ಬಾರಿ, ಲಲಿತಾ ಪ್ರಬಂದ ಹಾಗೂ ಗದ್ಯ ಸಾಹಿತ್ಯ ಪ್ರಕಾರಕ್ಕಾಗಿ ಪ್ರೊ. ರಹಮತ್ ತರೀಕೆರೆ ಹಾಗೂ ಕಾವ್ಯ ಪ್ರಕಾರದಲ್ಲಿ ಬಾ.ಹ. ರಮಾಕುಮಾರಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ತುಮಕೂರಿನ ಬಾಪೂಜಿ ವಿದ್ಯಾಸಂಸ್ಥೆಯ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಜನವರಿ 20ರಂದು ನಡೆಯಲಿದೆ. ಸಾಹಿತ್ಯ ವಿಮರ್ಶಕ ಪ್ರೊ. ಬಸವರಾಜ ಕಲ್ಗುಡಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನ ತಿಳಿಸಿದೆ. ಕಾರ್ಯಕ್ರಮದಲ್ಲಿ ಲೇಖಕ ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನದಲಿದ್ದಾರೆ, ಪ್ರತಿಷ್ಠಾನದ ಅಧ್ಯಕ್ಷ ಎಂ.ಬಸವಯ್ಯ ಇರುತ್ತಾರೆ ಎಂದು ಪ್ರತಿಷ್ಠಾನ ಹೇಳಿದೆ.

MORE NEWS

ಕನ್ನಡ ಸಾಹಿತ್ಯ ಅಕಾಡೆಮಿಯ 2023-24ನೇ ಸಾಲಿನ ವಿವಿಧ ಪ್ರಶಸ್ತಿಗಳ ಪ್ರಶಸ್ತಿ ಪ್ರದಾನ ಸಮಾರಂಭ

05-12-2025 ಬೆಂಗಳೂರು

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ʻಗೌರವ ಪ್ರಶಸ್ತಿ 2024', ʻಸಾಹ...

ಡಿಸೆಂಬರ್ 6ರಿಂದ ಬೆಂಗಳೂರು ಸಾಹಿತ್ಯ ಉತ್ಸವ

05-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವ: ಎರಡು ದಿನ, 108 ಕಾರ್ಯಕ್ರಮಗಳು ಬೆಂಗಳೂರು: ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿ...

ಸಾಹಿತ್ಯದಿಂದ ಸಾಂಸ್ಕೃತಿಕ ರಾಜಕಾರಣ ಮತ್ತು ಸಾಂಸ್ಕೃತಿಕ ಯಜಮಾನಿಕೆ ನಿರ್ವಚನ; ಭೀಮಾಶಂಕರ ಬಿರಾದಾರ

03-12-2025 ಬೆಂಗಳೂರು

ಬಾಗಲಕೋಟೆ : ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ...