ಪತ್ರಕರ್ತ ರವೀಶ್‌ ಕುಮಾರ್ ಅವರಿಗೆ ಮೊದಲ ಗೌರಿ ಲಂಕೇಶ್ ಪ್ರಶಸ್ತಿ

Date: 05-09-2019

Location: ಬೆಂಗಳೂರು


ಗೌರಿ ಲಂಕೇಶ್ ಸ್ಮರಣಾರ್ಥ ರಚಿಸಿರುವ ’ಗೌರಿ ಲಂಕೇಶ್’ ಪ್ರಶಸ್ತಿಗೆ ಎನ್‌ಡಿಟಿವಿಯ ಹಿರಿಯ ಪತ್ರಕರ್ತ ರವೀಶ್‌ ಕುಮಾರ್‌ ಅವರು ಭಾಜನರಾಗಿದ್ದಾರೆ. ಸೆಪ್ಟೆಂಬರ್ 22 ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಗೌರಿ ಲಂಕೇಶರ ಹತ್ಯೆಯಾಗಿ ಎರಡು ವರ್ಷ ಕಳೆದಿದ್ದು ಅವರ ನೆನಪಿನಲ್ಲಿ ಆರಂಭವಾದ ಗೌರಿ ಸ್ಮಾರಕ ಟ್ರಸ್ಟ್‌ ಗೌರಿಯವರ ಸ್ಮರಣಾರ್ಥ ’ಗೌರಿ ಲಂಕೇಶ್’ ಪ್ರಶಸ್ತಿಯನ್ನು ನೀಡಲು ಮುಂದಾಗಿದೆ. ಈ ಪ್ರಶಸ್ತಿಯು ಪ್ರಶಸ್ತಿ ಫಲಕ ಹಾಗೂ 1 ಲಕ್ಷ ನಗದನ್ನು ಒಳಗೊಂಡಿದೆ.

ಬಿಹಾರದ ಜಿತ್ವಾರ್ಪುರದಲ್ಲಿ ಜನಿಸಿದ ರವೀಶ್ ಕುಮಾರ್ ಅವರು ದೆಹಲಿ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಸಾರ್ವಜನಿಕ ವ್ಯವಹಾರಗಳ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಎನ್‌ಡಿಟಿವಿಯಲ್ಲಿ ಹಿರಿಯ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2019ನೇ ಸಾಲಿನ ಮ್ಯಾಗೆಸ್ಸೆ ಪ್ರಶಸ್ತಿ ಇವರಿಗೆ ಒಲಿದು ಬಂದಿದೆ.

 

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...