H S Venkatesha Murthy; ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ‌ಮೂರ್ತಿ ಇನ್ನಿಲ್ಲ

Date: 30-05-2025

Location: ಬೆಂಗಳೂರು


ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರರು ಹಾಗೂ ಹೆಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿರುವ ಹೆಚ್.ಎಸ್ ವೆಂಕಟೇಶಮೂರ್ತಿ (HS Venkatesh Murty) ಇಂದು ವಿಧಿವಶರಾಗಿದ್ದಾರೆ.

80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ದಾವಣಗೆರೆ (Davanagere) ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು.


ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ (PH.D) ಪದವಿ ಪಡೆದಿದ್ದಾರೆ. 2000ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದರು.

ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನು ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ.

ಕೃತಿಗಳು:
ನಾಟಕಗಳು :
ಕ್ರಿಯಾಪರ್ವ, ಎಷ್ಟೊಂದು ಮುಗಿಲು, ನದೀತೀರದಲ್ಲಿ, ಉತ್ತರಾಯಣ, ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ, ಕಂಸಾಯಣ ಮುಂತಾದವು.
ಇವರ ಮುಖ್ಯ ಕಾವ್ಯಕೃತಿಗಳು; ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಮೊದಲಾದವು.
ಕವನ ಸಂಕಲನಗಳು: ಸಿಂದಬಾದನ ಆತ್ಮಕಥೆ, ಕ್ರಿಯಾಪರ್ವ, ಒಣಮರದ ಗಿಳಿಗಳು, ಎಷ್ಟೊಂದು ಮುಗಿಲು
ನದೀತೀರದಲ್ಲಿ, ಉತ್ತರಾಯಣ.
ಮಕ್ಕಳ ಕೃತಿಗಳು: ಹಕ್ಕಿಸಾಲು, ಅಳಿಲು ರಾಮಾಯಣ, ಅಜ್ಜೀ ಕಥೆ ಹೇಳು, ಚಿನ್ನಾರು ಮುತ್ತ

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿವೆ.
 

MORE NEWS

ಎಸ್. ಜಿತೇಂದ್ರ ಕುಮಾರ್ ಗೆ ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ ಪ್ರಶಸ್ತಿ

24-06-2025 ಬೆಂಗಳೂರು

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಕೆ.ಜೆ. ಪಾರ್ಶ್ವನಾಥ್ ತಮ್ಮ ತಂದೆತಾಯಿ ಹೆಸರಿನಲ್ಲಿ ಸ್ಥಾಪಿಸಿರುವ ಕಂಬತ್ತಳ...

ಸಂಸ್ಕೃತಿ ಸಂವರ್ಧನೆಯಲ್ಲಿ ಹಂಸಜ್ಯೋತಿ ಪಾತ್ರ ಹಿರಿದು; ಶ್ರೀನಿವಾಸ ಜಿ ಕಪ್ಪಣ್ಣ

23-06-2025 ಬೆಂಗಳೂರು

ಬೆಂಗಳೂರು: ಹಂಸ ಜ್ಯೋತಿ ಟ್ರಸ್ಟ್ ಆಯೋಜನೆಯಲ್ಲಿ ಹಂಸ ಜ್ಯೋತಿಯ ಸುವರ್ಣ ಸಂಭ್ರಮಾಚರಣೆ ; ಹಂಸ ಸಾಂಸ್ಕೃತಿಕ ಸಂಭ್ರಮ ಅಂತರ...

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಪುನರಾಯ್ಕೆ

23-06-2025 ಬೆಂಗಳೂರು

ಬೆಂಗಳೂರು: ಕಾಂಗ್ರೆಸ್ ಮುಖಂಡ ಬಿ.ಎಲ್. ಶಂಕರ್ ಅವರು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್...