Date: 02-12-2025
Location: ಬೆಂಗಳೂರು
ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿ -2026 ಕ್ಕೆ ಈ ಬಾರಿ ಬೆಂಗಳೂರಿನ ಕನ್ನಡ ಕಿರುತೆರೆ ನಟ, ರಂಗನಿರ್ದೇಶಕ, ವಾಗ್ಮಿ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ.
ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂಪಾಯಿ 50,000 ನಗದಿನೊಂದಿಗೆ ಗೌರವಿಸಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್ ಉಪಾಧ್ಯಕ್ಷರಾದ ಡಾ. ಭಾರ್ಗವಿ ಐತಾಳ್ , ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಇದರ ಸದಸ್ಯ ವಾಸುದೇವ ಅಡಿಗ ಉಪಸ್ಥಿತರಿದ್ದರು.
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ʻಗೌರವ ಪ್ರಶಸ್ತಿ 2024', ʻಸಾಹ...
ಬೆಂಗಳೂರು ಸಾಹಿತ್ಯ ಉತ್ಸವ: ಎರಡು ದಿನ, 108 ಕಾರ್ಯಕ್ರಮಗಳು ಬೆಂಗಳೂರು: ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿ...
ಬಾಗಲಕೋಟೆ : ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ...
©2025 Book Brahma Private Limited.