ಎಸ್. ಷಡಕ್ಷರಿ ಸೇರಿದಂತೆ ಮೂವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ

Date: 06-12-2022

Location: ಬೆಂಗಳೂರು


ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಲೇಖಕರಾದ ಕೃಷ್ಣಪ್ಪ ಜಿ ಮತ್ತು ಎಸ್. ಷಡಕ್ಷರಿ ಅವರು ಈ ಬಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯನ್ನು ಡಿಸೆಂಬರ್ 8 ರಂದು ನಡೆಯಲಿರುವ ನುಡಿಹಬ್ಬದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಲಿದ್ದಾರೆ.

ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ.ಮಲ್ಲೇಪುರಂ ಜಿ ವೆಂಕಟೇಶ್ ಘಟಿಕೋತ್ಸವ ಭಾಷಣ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ್ ಪಿಎಚ್‌ಡಿ ಪದವಿ ಪ್ರದಾನ ಮಾಡಲಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಮತ್ತು ಷಡಕ್ಷರಿ ಅವರ ಕೊಡುಗೆ ಮತ್ತು ಸಾಮಾಜಿಕ ಸೇವೆ, ವೈದ್ಯಕೀಯ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ಡಾ ಮಂಜುನಾಥ್ ಅವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

 

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...