ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಕಡಕೋಳ

Date: 04-11-2019

Location: ಯಡ್ರಾಮಿ


ಯಡ್ರಾಮಿ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಕಡಕೋಳ ಅವರು ಆಯ್ಕೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ರಂಗ ಸಮಾಜದ ನಿಕಟಪೂರ್ವ ಸದಸ್ಯ ಮಲ್ಲಿಕಾರ್ಜುನ ಕಡಕೋಳ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 22ರಂದು ಯಡ್ರಾಮಿಯಲ್ಲಿ ಸಮ್ಮೇಳನ ನಡೆಯಲಿದೆ.

ಮಲ್ಲಿಕಾರ್ಜುನ ಕಡಕೋಳ ಅವರು ಯಡ್ರಾಮಿ ತಾಲ್ಲೂಕಿನ ಕಡಕೋಳದ ತತ್ವಪದಕಾರ ಸಾಧು ಶಿವಣ್ಣ ಹಾಗೂ ನಿಂಗಮ್ಮ ದಂಪತಿಯ ಪುತ್ರ. ಅವರು ಪಿಯುಸಿ ಓದುವಾಗಲೇ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದವರು. ವಿದ್ಯಾರ್ಥಿ ದಿನಗಳಲ್ಲೇ ಸಾಹಿತ್ಯದೊಲವು ಅವರನ್ನು ಆಕರ್ಷಿಸಿತು. ಆರಂಭದಲ್ಲಿ ಅವರ ವೈಚಾರಿಕ ಲೇಖನಗಳು 'ಕ್ರಾಂತಿ' ಹಾಗೂ 'ಪ್ರಪಂಚ'ದಲ್ಲಿ ಪ್ರಕಟವಾದವು. 'ಪ್ರಜಾವಾಣಿ' ಸೇರಿ ಕನ್ನಡದ ಮತ್ತಿತರ ಪತ್ರಿಕೆಗಳಲ್ಲಿ ಅವರ ಕತೆ, ಕವನ, ಲೇಖನ, ಸಂದರ್ಶನ, ಅಂಕಣ ಬರಹ ಪ್ರಕಟಗೊಂಡಿವೆ. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕೈವಾರ ನಾರಾಯಣ ತಾತಯ್ಯ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಲ್ಲಿಕಾರ್ಜುನ ಕಡಕೋಳ ಅವರಿಗೆ ಬುಕ್ ಬ್ರಹ್ಮದಿಂದ ಅಭಿನಂದನೆ 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...