ಸಾಹಿತ್ಯಕ್ಕೆ ಕಣವಿಯವರ ಕೊಡುಗೆ ಅಪಾರ : ಗುರುಲಿಂಗ ಕಾಪಸೆ

Date: 28-06-2022

Location: ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನ, ಧಾರವಾಡ


ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಮಂಗಳವಾರ ಶತಮಾನೋತ್ತರ ಬೆಳ್ಳಿ ಹಬ್ಬ ಹಾಗೂ ನಾಡೋಜ ಡಾ. ಚೆನ್ನವೀರ ಕಣವಿ ಮತ್ತು ಶಾಂತಾದೇವಿ ಕಣವಿ ಸಂಸ್ಮರಣದ ಸವಿನೆನಪಿನಲ್ಲಿ ’ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ’ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಅವರು, “ನಾಡೋಜ ಡಾ. ಚೆನ್ನವೀರ ಕಣವಿ ಮತ್ತು ಅವರ ಕುಟುಂಬವು ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಅವರ ಸ್ಮರಣಾರ್ಥ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದ ಕರ್ನಾಟಕ ವಿದ್ಯಾವರ್ಧಕ ಸಂಘದ ಕಡೆಯಿಂದ ನಾಡಿಗೆ ಮತ್ತಷ್ಟು ಕೊಡುಗೆಗಳು ಸಿಗುವಂತಾಗಲಿ” ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಉಪಸ್ಥಿತರಿದ್ದರು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...