ಸಾಮಾಜಿಕ ಕಳಕಳಿಯ ಲೇಖಕ ವಿಠ್ಠಲ ಭಂಡಾರಿ ಇನ್ನಿಲ್ಲ

Date: 08-05-2021

Location: ಬೆಂಗಳೂರು


ದೇಶದ ಪ್ರಜಾಪ್ರಭುತ್ವ ಮೌಲ್ಚಗಳನ್ನು ಪ್ರತಿಪಾದಿಸುವ ‘ಸಂವಿಧಾನದ ಓದು’ ಚಳವಳಿಯ ಮೂಲಕ ರಾಜ್ಯದಾದ್ಯಂತ ಚಿರಪರಿಚಿತ ಹಾಗೂ ಲೇಖಕ ವಿಠ್ಠಲ ಭಂಡಾರಿ ಅವರು ಕೋವಿಡ್ -19ಕ್ಕೆ ಬಲಿಯಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ನಿಧನರಾದರು. ಸಾಹಿತಿ ಆರ್.ವಿ.ಭಂಡಾರಿ ಅವರ ಪುತ್ರರು. ಪತ್ನಿ ಹೋರಾಟಗಾರ್ತಿ ಯಮುನಾ ಗಾಂವ್ಕರ್ ಹಾಗೂ ಇಬ್ಬರು ಸಹೋದರಿಯರಿದ್ದಾರೆ. ಸಿದ್ದಾಪುರದ ಎಂಜಿಎಸ್ ಮತ್ತು ಜಿಎಚ್ ಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ವಿಠ್ಠಲ ಭಂಡಾರಿ, ಒಡಲ ಬೆಂಕಿ (ಕವನ ಸಂಕಲನ) ಹಾಗೂ ಪ್ರೀತಿಯ ಕಾಳು (ಮಕ್ಕಳ ಕವನ ಸಂಕಲನ) ರಚಿಸಿದ್ದರು.

 

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...