Date: 27-09-2023
Location: ಬೆಂಗಳೂರು
2023ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ಸವಿರಾಜ್ ಆನಂದೂರು ಅವರ 'ಗಂಡಸರನ್ನು ಕೊಲ್ಲಿರಿ' ಎಂಬ ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ.
ಕವಿ, ವಿಮರ್ಶಕರಾದ ಡಾ. ಸಬೀಹಾ ಭೂಮಿಗೌಡ ಮತ್ತು ಡಾ. ಚಂದ್ರಶೇಖರ ತಾಳ್ಯ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು.
ಈ ಪುರಸ್ಕಾರವು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ವಿಭಾ ಸಾಹಿತ್ಯ ಪ್ರಶಸ್ತಿಯ ಸಂಚಾಲಕರಾದ ಸುನಂದಾ ಹಾಗೂ ಪ್ರಕಾಶ ಕಡಮೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸವಿರಾಜ್ ಆನಂದೂರು ಪರಿಚಯ: ಸವಿರಾಜ್ ಆನಂದೂರು ಹುಟ್ಟಿದ್ದು 1987 ರಲ್ಲಿ, ಆಗುಂಬೆ ಸಮೀಪದ ಆನಂದೂರಿನಲ್ಲಿ. ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರ. ಹವ್ಯಾಸಿ ತಾಳಮದ್ದಲೆ ಅರ್ಥಧಾರಿ, ರಂಗಭೂಮಿ ಕಲಾವಿದ, ಪ್ರಸ್ತುತ ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಥೆಗಾರರಾಗಿಯೂ ಹಲವು ಕಥಾಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ. 'ಬ್ಲೂಬುಕ್' ಹಾಗೂ 'ನಕ್ಷತ್ರಕಡ್ಡಿ' ಅವರ ಈವರೆಗಿನ ಪ್ರಕಟಿತ ಕೃತಿಗಳು.
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
©2025 Book Brahma Private Limited.