ಶೋಭಾ ನಾಯಕ್ ಮತ್ತು ಬಿದಲೋಟಿ ರಂಗನಾಥ್‌ಗೆ ಗವಿಸಿದ್ದ ಕಾವ್ಯ ಪ್ರಶಸ್ತಿ

Date: 31-10-2020

Location: ಬೆಂಗಳೂರು


ಕವಿ ಗವಿಸಿದ್ದ ಎನ್‌. ಬಳ್ಳಾರಿ ಅವರ ಹೆಸರಿನಲ್ಲಿ ಕೊಡುವ 2020ನೇ ಸಾಲಿನ ಕಾವ್ಯ ಪ್ರಶಸ್ತಿಗೆ ಶೋಭಾ ನಾಯಕ್‌ ಅವರ ‘ಶಯ್ಯಾಗೃಹದ ಸುದ್ದಿಗಳು’ ಮತ್ತು ಬಿದಲೋಟಿ ರಂಗನಾಥ ಅವರ ‘ದೇವರಿಲ್ಲದ ಸಾಕ್ಷಿಗೆ ರುಜು ಹಾಕಿ’ ಕವನ ಸಂಕಲನಗಳು ಆಯ್ಕೆಯಾಗಿವೆ.

ಪ್ರಶಸ್ತಿಯು 5 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಿಸೆಂಬರ್‌ನಲ್ಲಿ ಕೊಪ್ಪಳದಲ್ಲಿ ನಡೆಯುವ ಗವಿಸಿದ್ದ ಎನ್‌. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ವಿತರಿಸುವುದಾಗಿ ಗವಿಸಿದ್ದ ಎನ್‌. ಬಳ್ಳಾರಿ ವೇದಿಕೆ ಮತ್ತು ತಳಮಳ ಪ್ರಕಾಶನದ ಮಹೇಶ್‌ ಬಳ್ಳಾರಿ ಅವರು ತಿಳಿಸಿದ್ದಾರೆ.

ಶೋಭಾ ನಾಯಕ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರೈಸಿದರು. ಕಂಪ್ಯೂಟರ್ ಸಾಯನ್ಸ್ ಡಿಪ್ಲೊಮಾ ಆಂಡ್ ಇಂಜನಿಯರಿಂಗ್, ಪಿ.ಜಿ.ಡಿಪ್ಲೊಮಾ ಇನ್ ಜೈನಾಲಾಜಿ ಹಾಗೂ ಆರು ಸುವರ್ಣ ಪದಕಗಳೊಂದಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಎಂ.ಫಿಲ್ ಹಾಗೂ ಪಿ ಎಚ್. ಡಿ. ಪದವೀಧರರಾದ ಇವರು, ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿತ್ರಕಲೆ ಹಾಗೂ ಸಾಹಿತ್ಯ ಇವರ ಆಸಕ್ತಿಯ ಕ್ಷೇತ್ರಗಳು.

ಕವಿ ರಂಗನಾಥ ಬಿ ಎಂ ಅವರು 1980 ಜುಲೈ 15 ರಂದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಿದಲೋಟಿಯಲ್ಲಿ ಜನಿಸಿದರು. ವೃತ್ತಿಯಲ್ಲಿ ವಕೀಲರು. ‘ಮಣ್ಣಿಗೆ ಬಿದ್ದ ಹೂಗಳು’ ‘ಬದುಕು ಸೂಜಿ ಮತ್ತು ನೂಲು’ ಅವರ ಎರಡು ಕವನ ಸಂಕಲನಗಳು. ಅವರ ಕಾವ್ಯಕ್ಕೆ ‘ಸಂಕ್ರಮಣ’ ಬಹುಮಾನ ಹಾಗೂ ತಾಲೂಕು ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...