ಮಹಿಳೆಯರು ಹಾಗೂ ಲಿಂಗ ಅಲ್ಪಸಂಖ್ಯಾತರಿಗಾಗಿ ಕವನ ಹಾಗೂ ಕಥಾ ಸ್ಪರ್ಧೆ

Date: 17-09-2019

Location: ಬೆಂಗಳೂರು


ಅಂಡರ್‌ ದಿ ರೈನ್‌ ಟ್ರೀ ಸಂಸ್ಥೆಯು ಆಯೋಜಿಸಿರುವ ಮಹಿಳಾ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಹಾಗೂ ಲಿಂಗ ಅಲ್ಪಸಂಖ್ಯಾತರಿಗಾಗಿ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕವನ ಹಾಗೂ ಕಥಾ ಸ್ಪರ್ಧೆ ಆಯೋಜಿಸಿದೆ.

ಈ ಹಬ್ಬದ ಕೇಂದ್ರ ವಿಷಯ ಮಹಿಳಾ ಸಬಲೀಕರಣವಾಗಿದ್ದು ಇದೇ ವಿಷಯದ ಕುರಿತು ಕವನ ಹಾಗೂ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. 16 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಲಿಂಗ ಅಲ್ಪಲಂಖ್ಯಾತರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಈ ಸ್ಪರ್ಧೆಗೆ ಕಳುಹಿಸುವ ಕವನ ಅಥವಾ ಕಥೆ ಸ್ವರಚಿತವಾಗಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು ಎಂಬ ನಿಬಂಧನೆಗಳು ಇವೆ. ನೀವು ಬರೆದ ಕಥೆ ಅಥವಾ ಕವನವನ್ನು ಕಳುಹಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ.

ಈ ಸ್ಪಧೆಯಲ್ಲಿ ಗೆದ್ದವರಿಗೆ ನವೆಂಬರ್‌ 1 ಮತ್ತು 2ರಂದು ಬೆಂಗಳೂರಿನಲ್ಲಿ ನಡೆಯುವ ಮಹಿಳಾ ಸಾಂಸ್ಕೃತಿಕ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಸ್ಪರ್ಧೆಯ ನೀತಿ ನಿಯಮಗಳಿಗಾಗಿ ನೋಡಿ: www.undertheraintreefestival.com

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...