ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಅವರಿಗೆ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’

Date: 11-06-2024

Location: ಬೆಂಗಳೂರು


ಬೆಂಗಳೂರು: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ|ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ'ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ(ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು.

ಪ್ರಶಸ್ತಿಗೆ ವಿಜಯಪುರದ ಸುಮಿತ್ ಮೇತ್ರಿಯವರ 'ಈ ಕಣ್ಣುಗಳಿಗೆ ಸದಾ ನೀರಡಿಕೆ' ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ 'ಕೇಳಿಸದ ಸದ್ದುಗಳು' ಕೃತಿಗಳು ಆಯ್ಕೆಯಾಗಿರುತ್ತವೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು.

ಪ್ರಶಸ್ತಿಗೆ 42 ಕೃತಿಗಳು ಬಂದಿದ್ದು, ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕರಾದ ಬೆಂಗಳೂರಿನ ಪ್ರೊ. ಎಚ್. ದಂಡಪ್ಪ ಹಾಗೂ ಉಡುಪಿಯ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ತೀರ್ಪುಗಾರರಾಗಿ ಸಹಕರಿಸಿದ್ದರು.

ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿದ್ದು ಇಬ್ಬರಿಗೆ ಹಂಚಿಹೋಗಿವೆ . ಆಗಸ್ಟ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೆೈ, ಅಧ್ಯಕ್ಷರಾದ ಪ್ರೊಫೆಸರ್ ಶಂಕರ್ ಹಾಗೂ ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನದ ನಿರ್ದೇಶಕರಾದ ನಾರಾಯಣ ಮಡಿ ಉಪಸ್ಥಿತರಿದ್ದರು.

 

MORE NEWS

ಮಾಲತಿ ಪಟ್ಟಣಶೆಟ್ಟಿ, ಎಸ್.ಜಿ.ಸಿದ್ದರಾಮಯ್ಯ ಅವರಿಗೆ `ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ'

27-03-2025 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನೀಡಲಾಗುವ ಗುರುಲಿಂಗ ಕಾಪಸೆ ಸಾಹಿತ್ಯ ಪ್ರ...

ಭಾನುಪ್ರಕಾಶ್ ಶರ್ಮ ಮತ್ತು ಶ್ರೀಧರ ದೀಕ್ಷಿತ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ 

25-03-2025 ಬೆಂಗಳೂರು

ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...

ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ಸಾಧಕರನ್ನು ಗುರುತಿಸಿ ಕೊಡುವುದು ಶ್ರೇಷ್ಠ; ಶಿವರಾಜ ತಂಗಡಗಿ

24-03-2025 ಬೆಂಗಳೂರು

ಬೆಂಗಳೂರು: "ಯಾವುದೇ ಒಂದು ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ವ್ಯಕ್ತಿಯ ಸಾಧನೆಯನ್ನು ಗುರುತಿಸಿ ಪ್...