Date: 28-11-2024
Location: ಬೆಂಗಳೂರು
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಐದು ವರ್ಷಗಳ ಪ್ರತಿಷ್ಠಿತ ಅನುಪಮಾ ಪ್ರಶಸ್ತಿ ಪ್ರಕಟವಾಗಿದ್ದು, ಡಾ.ವಸುಂಧರಾ ಭೂಪತಿ ಸೇರಿದಂತೆ ಐದು ಜನ ಲೇಖಕಿಯರಿಗೆ ಈ ಪ್ರಶಸ್ತಿ ಸಂದಿದೆ.
ಲೇಖಕಿಯರ ಸಂಘದಿಂದ ಅನುಕ್ರಮವಾಗಿ 2020, 2021, 2022, 2023 ಹಾಗು 2024ನೇ ಸಾಲಿಗೆ ಹಿರಿಯ ಲೇಖಕಿಯರಾದ ಡಾ. ವಿಜಯಾ ಸುಬ್ಬರಾಜ್, ಡಾ.ವಸುಂಧರಾ ಭೂಪತಿ, ಡಾ. ಸಬೀಹ ಭೂಮಿಗೌಡ, ಡಾ. ಕೆ.ಆರ್. ಸಂಧ್ಯಾರೆಡ್ಡಿ ಹಾಗೂ ಡಾ. ಲತಾಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಡಾ. ಎಚ್.ಎಲ್. ಪುಷ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಿದ್ಧ ಲೇಖಕಿಯಾದ ಡಾ. ಅನುಪಮಾ ನಿರಂಜನ ಅವರ ಹೆಸರಿನ ದತ್ತಿ ಪ್ರಶಸ್ತಿ ಇದಾಗಿದ್ದು, ಸಾಹಿತ್ಯದಲ್ಲಿ ಲೇಖಕಿಯರ ಒಟ್ಟು ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯ ಮೊತ್ತ ಹತ್ತು ಸಾವಿರ ರು. ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ. ಡಿಸೆಂಬರ್ 8 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.
ಆಯ್ಕೆ ಸಮಿತಿಯಲ್ಲಿ ಹಿರಿಯ ವಿಮರ್ಶಕರಾದ ಡಾ. ಭೈರಮಂಗಲ ರಾಮೇಗೌಡ, ಡಾ. ಎಂ.ಎಸ್. ಆಶಾದೇವಿ ಹಾಗೂ ಚಂದ್ರಿಕಾ ಪುರಾಣಿಕ್ ಅವರು ಇದ್ದರು.
ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.