ವಿಚಾರವಾದಿ, ಲೇಖಕ ಜಿ.ಕೆ. ಗೋವಿಂದರಾವ್ ಇನ್ನಿಲ್ಲ

Date: 15-10-2021

Location: ಬೆಂಗಳೂರು


ಪ್ರಗತಿಪರ ವಿಚಾರಗಳೊಂದಿಗೆ ಖ್ಯಾತರಾಗಿದ್ದ ಹಾಗೂ ತಮ್ಮ ಕಂಚಿನ ಕಂಠದಿಂದ ಸೈದ್ಧಾಂತಿಕತೆಯನ್ನುಪ್ರಬಲವಾಗಿ ಪ್ರತಿಪಾದಿಸುತ್ತಿದ್ದ ಪ್ರೊ. ಜಿ.ಕೆ.ಗೋವಿಂದರಾವ್ (ಜಿಕೆಜಿ) ಅವರು ಇಂದು ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ (ಜನನ: 1937 ಏಪ್ರಿಲ್ 27) ವಯಸ್ಸಾಗಿತ್ತು.

ಮೂಲತಃ ಬೆಂಗಳೂರಿನವರಾದ ಅವರು ನೇರ-ನಿಷ್ಠುರ ಮಾತುಗಳಿಂದ ತಮ್ಮದೇ ಆದ ವೈಚಾರಿಕ ವಲಯವನ್ನು ಸೃಷ್ಟಿಸಿಕೊಂಡಿದ್ದ ಜಿ.ಕೆ. ಗೋವಿಂದರಾವ್, ಮಾನವೀಯತೆಗೆ ಸಾಕ್ಷಿಪ್ರಜ್ಞೆಯಂತಿದ್ದರು. ಇಂಗ್ಲಿಷ್‌ ಪ್ರಾಧ್ಯಾಪಕರಾಗಿ, ರಂಗಭೂಮಿ ಹಾಗೂ ಸಿನಿಮಾರಂಗದೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಅನ್ಯಾಯ, ಕೋಮುವಾದ, ಅನಾಚಾರಗಳ ವಿರುದ್ಧ ಜನರನ್ನು ಸಂಘಟಿಸಿ ಸಮಕಾಲೀನ ಪ್ರಜಾಸತ್ತಾತ್ಮಕ ಆಂದೋಲನಗಳಿಗೆ ಚಾಲನೆ ನೀಡುತ್ತಿದ್ದ ಅವರು, ಸದಾ ಜನಪರ ನಿಲುವನ್ನು ತಳೆದಿದ್ದರು.

ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಹೀಗೆ ವೈಚಾರಿಕತೆಯೇ ತಮ್ಮ ನಡೆ-ನುಡಿಯ ಜೀವಾಳವಾಗಿಸಿಕೊಂಡಿದ್ದರು. ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ಹಾಗೂ ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...