ವಿಶು ಕುಮಾರ್ ಸಾಹಿತ್ಯ ಪ್ರಶಸ್ತಿ: ಬಿ. ಜನಾರ್ಧನ ಭಟ್ ಆಯ್ಕೆ

Date: 01-10-2022

Location: ಬೆಂಗಳೂರು


ಯುವ ವಾಹಿನಿ ಕೇಂದ್ರ ಸಮಿತಿಯಿಂದ ನೀಡಲಾಗುವ ವಿಶು ಕುಮಾರ್ ಸಾಹಿತ್ಯ ಪ್ರಶಸ್ತಿಗೆ ಈ ಬಾರಿ ಲೇಖಕ, ವಿಮರ್ಶಕ ಡಾ. ಬಿ. ಜನಾರ್ಧನ ಭಟ್ ಆಯ್ಕೆಯಾಗಿದ್ದಾರೆ.

ಯುವ ವಾಹಿನಿ ಕೇಂದ್ರ ಸಮಿತಿ ಹಾಗೂ ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ ಮಾಣಿ ಘಟಕ ಮತ್ತು ಮಾಣಿ ಘಟಕ ಮತ್ತು ಮಾಣಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಕಾರದಲ್ಲಿ ಅ. 2 ರಂದು ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡದ ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿ 10 ಸಾವಿರ ರೂ ನಗದು ಒಳಗೊಂಡಿದೆ.

ಸಮೀಕ್ಷಾಗೆ ಯುವ ಸಾಹಿತಿ ಪ್ರಶಸ್ತಿ:
ಇದೇ ವೇಳೆ 5 ಸಾವಿರ ರೂ. ನಗದು ಸಹಿತ ಡಾ. ಪ್ರಭಾಕರ ನೀರುಮಾರ್ಗ ಯುವ ಸಾಹಿತಿ ಪ್ರಶಸ್ತಿಯನ್ನು ಯುವ ಸಾಹಿತಿ ಸಮೀಕ್ಷಾ ಶಿರ್ಲಾಲು ಅವರಿಗೆ ಪ್ರದಾನ ಮಾಡಲಾಗುವುದು ಎಂದು ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಾಣಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಸುರೇಶ್ ಸೂರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ. ಮಾಧವ ಭಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಯುವ ಸಾಹಿತಿ ಪ್ರಶಸ್ತಿಯನ್ನು ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಾಣಿಜ್ ವಿಭಾಗ ಮುಖ್ಯಸ್ಥೆ ಡಾ. ಆಶಾಲತಾ ಎಸ್. ಸುವರ್ಣ ಪ್ರದಾನ ಮಾಡಲಿದ್ದಾರೆ. ಲೇಖಕ ನರೇಂದ್ರ ರೈ ದೇರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶುಕುಮಾರ್ ನೆನಪಿಗಾಗಿ ಆಯೋಜಿಸಲಾದ ವಿವಿಧ ಸಾಹಿತ್ಯ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಇದೇ ವೇಳೆ ಜರುಗಲಿದೆ ಎಂದರು.

ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕ ಪ್ರಶಾಂತ್ ಅನಂತಾಡಿ, ಕಾರ್ಯದರ್ಶಿ ಜೀವನ್ ಕೊಲ್ಯ, ಯುವವಾಹಿನಿ ಮಾಣಿ ಘಟಕ ಅಧ್ಯಕ್ಷ ಜಯಂತ ಬರಿಮಾರು, ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಟಿ. ಶಂಕರ ಸುವರ್ಣ ಉಪಸ್ಥಿತರಿದ್ದರು.

MORE NEWS

ಬೆಳಗಾವಿ ಗಡಿ ಹೋರಾಟದಲ್ಲಿ ಶಿವರಾಮು...

27-11-2022 ಬೆಂಗಳೂರು

'ಸುಪ್ರೀಂಕೋರ್ಟ್‌ನಲ್ಲಿ ಮತ್ತೊಮ್ಮೆ ಬೆಳಗಾವಿ ಗಡಿ ವಿವಾದ ವಿಚಾರಣೆಗೆ ಬಂದಿದ್ದು, ಬೆಳಗಾವಿ, ನಿಪ್ಪಾಣಿ ಸೇರಿ...

ಹಂಪಿ ಕನ್ನಡ ವಿ.ವಿ ಪ್ರಾಧ್ಯಾಪಕ ವಾ...

27-11-2022 ವಿಜಯನಗರ

ಭೀಕರ ಕಾರು ಅಪಘಾತದಲ್ಲಿ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್, ಪ್ರಾಧ್ಯಾಪಕ ಪ್ರೊ.ಸಿ...

ತಳ ಸಮುದಾಯದ ಸಮಸ್ಯೆಗಳು, ಅವರ ಜೀವನ...

27-11-2022 ರಾಯಚೂರು

ಕವಿ ನರಸಿಂಹಲು ವಡವಾಟಿ ಅವರು ತಳ ಸಮುದಾಯದ ಸಮಸ್ಯೆಗಳು ಅವರ ಜೀವನ ಮತ್ತು ಪರಿಸರವನ್ನು ಇಟ್ಟುಕೊಂಡು ಮೌನ ಮುರಿದಾಗ ಕವನ ಸ...