'ವ್ಯವಸ್ಥೆಯೊಳಗಿನ ಭ್ರಷ್ಟಾಚಾರ ಹೊರಬಂದರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ'

Date: 31-10-2020

Location: ಕುಂದಾಪುರ


ಜನರ ಕೈಗೆ ಅಧಿಕಾರ ಕೊಡಬೇಕು ಎನ್ನುವ ನಿಲುವು ಇದ್ದರೂ ಕೂಡಾ ಅದು ಪರಿಣಾಮಕಾರಿಯಾಗಿ ಅನುಷ್ಠಾನ ಆಗದೇ ಇರುವುದನ್ನು ಕಾಣುತ್ತೇವೆ. ವ್ಯವಸ್ಥೆಯೊಳಗಿರುವ ಭ್ರಷ್ಟಚಾರ ಹೊರ ಬಂದರೆ ಎಲ್ಲಸಮಸ್ಯೆಗಳು ಪರಿಹಾರವಾಗುತ್ತದೆ. ಪಂಚಾಯತಿ ಪ್ರತಿನಿಧಿಗಳು ಕಾಯ್ದೆಗಳನ್ನು ತಿಳಿದುಕೊಂಡು ತಮ್ಮ ಹಕ್ಕು, ಕರ್ತವ್ಯಗಳನ್ನು ಪಾಲಿಸಬೇಕು. ಆ ಹಿನ್ನೆಲೆಯಲ್ಲಿ ‘ಜನಾಧಿಕಾರ’ ಕೃತಿ ಮಾರ್ಗದರ್ಶಿಯಾಗಬಲ್ಲದು ' ಎಂದು ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು.

ಗ್ರಾಮ ಪಂಚಾಯತ್ ಹಕ್ಕೋತ್ತಾಯ ಆಂದೋಲನ ಮತ್ತು ಪಂಚಾಯತ್ ರಾಜ್ ಒಕ್ಕೂಟ ಸಹಕಾರದೊಂದಿಗೆ ಕುಂದಾಪುರ ತಾಲೂಕು ಪಂಚಾಯತಿ ಸಭಾಭವನದಲ್ಲಿ ನಡೆದ ಜನಪ್ರತಿನಿಧಿ ಪ್ರಕಾಶನ ಕುಂದಾಪುರ ಪ್ರಕಟಿಸಿರುವ ಪಂಚಾಯತ್ ರಾಜ್ ತಜ್ಞ ಎಸ್.ಜನಾರ್ದನ ಮರವಂತೆ ಸಂಕಲಿಸಿರುವ ಜನಾಧಿಕಾರ ಗ್ರಾಮ ಪಂಚಾಯಿತಿ ಮಾರ್ಗದರ್ಶಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

'ಸರ್ಕಾರಗಳು ಜನಹಿತವಾಗಿ ಕೆಲಸ ಮಾಡಬೇಕು. ಆದರೆ ಇವತ್ತು ಕೆಳಸ್ತರದಿಂದ ಲೋಕಸಭೆಯ ತನಕ ಮನಸ್ಸು ಬಿಚ್ಚಿ ಮಾತನಾಡುವ ಸ್ಥಿತಿ ಇದ್ದಂತಿಲ್ಲ. ಕೆಲವೊಂದು ಬಾರಿ ಅಧಿಕಾರವನ್ನು ಅಧಿಕಾರಿಗಳು ಕಬಳಿಸುತ್ತಾರೆ ಎನ್ನುವ ಆರೋಪಗಳು ಕೇಳಿ ಬರುತ್ತವೆ. ರದ್ದು ಮಾಡುವುದು, ಒಪ್ಪದಿರುವುದು, ತಡೆಹಿಡಿಯುವುದು ಈ ಮೂರರ ಅಡಿಯಲ್ಲಿಯೇ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ಪಂಚಾಯತ್ ವ್ಯವಸ್ಥೆಯಲ್ಲಿ ಕಾಯ್ದೆಗಳು ಪರಿಣಾಮಕಾರಿ ಅನುಷ್ಠಾನ ಆಗಬೇಕಾದ ಅಗತ್ಯತೆ ಇದೆ 'ಎಂದರು.

ಜನಾಧಿಕಾರ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ 3ನೇ ಹಣಕಾಸು ಆಯೋಗದ ಅನುಷ್ಠಾನ ಸಮಿತಿಯ ಅಧ್ಯಕ್ಷ ಎ.ಜಿ ಕೊಡ್ಗಿಯವರು, 'ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಅತೀ ಅಗತ್ಯ. ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ, ಅನುದಾನ ಸಿಗುವಂತಾಗಬೇಕು. ಎಸ್.ಜನಾರ್ದನ ಮರವಂತೆಯವರು ಪಂಚಾಯತ್ ವ್ಯವಸ್ಥೆಯಲ್ಲಿ ಸ್ವತಃ ಇದ್ದವರು. ಅವರ ಸಂಕಲಿಸಿರುವ ಈ ಪುಸ್ತಕದ ಸದುಪಯೋಗವನ್ನು ಎಲ್ಲಾ ಪಂಚಾಯತಿ ಪ್ರತಿನಿಧಿಗಳು ಪಡೆದುಕೊಳ್ಳಬೇಕು' ಎಂದರು.

ಜನಾಧಿಕಾರ ಕೃತಿಯ ಲೇಖಕ ಎಸ್.ಜನಾರ್ದನ ಮರವಂತೆ, ಕೇದಾರ ಮರವಂತೆ, ಉದಯ ಗಾಂವಕರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...