ಯಕ್ಷಗಾನ ಅಧ್ಯಯನಕ್ಕೆ ಆಕರ ಗ್ರಂಥ ಯಕ್ಷಮಾರ್ಗಮುಕುರ - ಮಹಾಬಲೇಶ್ವರ ಎಂ.ಎಸ್. 

Date: 03-10-2022

Location: ಧರ್ಮಸ್ಥಳ


ಹಲವು ವರ್ಷಗಳ ನಿರಂತರ ಅಧ್ಯಯನ ಮತ್ತು ಸಂಶೋಧನೆಯೊಂದಿಗೆ ಕಲಾವಿದೆ ಹಾಗೂ ಲೇಖಕಿ ಡಾ.ಮನೋರಮಾ ಬಿ.ಎನ್. ಬರೆದ ಯಕ್ಷಮಾರ್ಗಮುಕುರವು ಯಕ್ಷಗಾನವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡುವವರಿಗೆ ದಾರಿದೀಪ ಹಾಗೂ ಅಧಿಕೃತ ಆಕರ ಗ್ರಂಥವಾಗಿದೆ ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್‌. ಹೇಳಿದರು.

ಅವರು ಧರ್ಮಸ್ಥಳದಲ್ಲಿ ಶನಿವಾರ ನಡೆದ ಯಕ್ಷಮಾರ್ಗಮುಕುರ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಕರ್ಣಾಟಕ ಬ್ಯಾಂಕ್‌ ವತಿಯಿಂದ ಗ್ರಂಥ ಪ್ರಕಾಶನಕ್ಕೆ ಐದು ಲಕ್ಷ ರೂ. ನೆರವನ್ನು ಅವರು ಉಜಿರೆ ಅಶೋಕ ಭಟ್‌ರಿಗೆ ನೀಡಿದ್ದರು. ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿ, ಈ ಗ್ರಂಥ ಅದ್ವಿತೀಯ ಶಾಸ್ತ್ರೀಯ ದಾಖಲೆಯಾಗಿದೆ. ವಿಶ್ವವಿದ್ಯಾಲಯಗಳು ಮಾಡಬೇಕಾದ ಕಾರ್ಯವನ್ನು ಡಾ. ಮನೋರಮಾ ಮಾಡಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ ಶುಭಾಶಂಸನೆ ಮಾಡಿದರು. ಗ್ರಂಥದ ಬಗ್ಗೆ ಅಮೂಲ್ಯ ಹಾಗೂ ಶಾಶ್ವತ ಕೊಡುಗೆ ಎಂದರು. ಮಾಹಿತಿ ನೀಡಿದ ಲೇಖಕಿ ಡಾ. ಮನೋರಮಾ ಬಿ.ಎನ್‌. ಸತ್ಯದ ಅನ್ವೇಷಣೆಯೇ ಸಂಶೋಧನೆಯ ಗುರಿಯಾಗಿದೆ. ಆರಾಧನಾ ಸ್ವರೂಪದ ಕಲೆ ಯಕ್ಷಗಾನದಲ್ಲಿ ನಾಟ್ಯದ ರೂಪವಾದ ಆಂಗಿಕ ಅಭಿನಯದ ಬಗ್ಗೆ ತೌಲನಿಕ ಅಧ್ಯಯನದೊಂದಿಗೆ ಗ್ರಂಥದಲ್ಲಿ ಸಮಗ್ರ ಮಾಹಿತಿ ನೀಡಲಾಗಿದೆ ಎಂದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಹೆಗ್ಗಡೆ ದಂಪತಿಯ ವಿವಾಹದ ಸುವರ್ಣಮಹೋತ್ಸವ ವರ್ಷ ಆಚರಣೆ ಸಂದರ್ಭದಲ್ಲಿ ಗ್ರಂಥವನ್ನು ಅವರಿಗೆ ಸಮರ್ಪಣೆ ಮಾಡಲಾಯಿತು.

ಅಧ್ಯಕ್ಷತೆ ವಹಿಸಿದ ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಯಕ್ಷಗಾನದ ಎಲ್ಲ ವಿಚಾರಗಳನ್ನು ವೈಜ್ಞಾನಿಕ ಮತ್ತು ಶಾಸ್ತ್ರೀಯವಾಗಿ ಅಧ್ಯಯನ ಮಾಡಿ ಬರೆದ ಗ್ರಂಥವನ್ನು ಆಸಕ್ತರು ಕೊಂಡು ಓದಬೇಕು. ಕಲಾಕ್ಷೇತ್ರಕ್ಕೆ ಇದೊಂದು ಅಮೂಲ್ಯ ಹಾಗೂ ಶಾಶ್ವತ ಕೊಡುಗೆ ಎಂದರು.

ಧರ್ಮಸ್ಥಳ ಮೇಳದ ಎಲ್ಲ ಕಲಾವಿದರಿಗೆ ಈ ಗ್ರಂಥವನ್ನು ಉಚಿತ ಕೊಡುಗೆಯಾಗಿ ನೀಡುವುದಾಗಿ ಹೆಗ್ಗಡೆಯವರು ಪ್ರಕಟಿಸಿದರು. ಇಂಗ್ಲಿಷ್ ಭಾಷೆಗೆ ಈ ಗ್ರಂಥ ಭಾಷಾಂತರವಾದಲ್ಲಿ ವಿದೇಶದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳಿಗೂ ಧರ್ಮಸ್ಥಳದ ವತಿಯಿಂದ ಉಚಿತ ಕೊಡುಗೆಯಾಗಿ ವಿತರಿಸುವುದಾಗಿ ಅವರು ಹೇಳಿದರು.

ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಯಕ್ಷಮಾರ್ಗಮುಕುರ ಗ್ರಂಥವನ್ನು ಲೋಕಾರ್ಪಣೆ ಮಾಡಿದರು. ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಶೋಕ ಭಟ್ ಸ್ವಾಗತಿಸಿ ಕೃಷ್ಣಪ್ರಸಾದ್ ವಂದಿಸಿದರು. ಪತ್ರಕರ್ತ ಲಕ್ಷ್ಮೀಮಚ್ಚಿನ ಕಾರ್ಯಕ್ರಮ ನಿರ್ವಹಿಸಿದರು.

ಪೋಟೋ ಗ್ಯಾಲರಿ :

MORE NEWS

ಪ್ರಕಾಶ ಖಾಡೆ ‘ಬಾಳುಕುನ ಪುರಾಣ’ ಕೃತಿಗೆ ಕಸಾಪ ಅರಕೇರಿ ದತ್ತಿ ಪ್ರಶಸ್ತಿ

29-03-2024 ಬೆಂಗಳೂರು

ಬಾಗಲಕೋಟೆ: ಸಾಹಿತಿ ಡಾ.ಪ್ರಕಾಶ ಗ.ಖಾಡೆ ಅವರ ‘ಬಾಳುಕುನ ಪುರಾಣ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್...

2024ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

29-03-2024 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...