Date: 18-06-2025
Location: ನವದೆಹಲಿ
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ‘ಯುವ ಪುರಸ್ಕಾರ’ ಮತ್ತು ‘ಬಾಲಸಾಹಿತ್ಯ ಪುರಸ್ಕಾರ’ ಪಟ್ಟಿಯನ್ನು ಪ್ರಕಟಿಸಿದೆ.
‘ಯುವ ಪುರಸ್ಕಾರ’ಕ್ಕೆ ಆರ್. ದಿಲೀಪ್ ಕುಮಾರ್ ಅವರ ‘ಪಚ್ಚೆಯ ಜಗುಲಿ’ ಮತ್ತು ಶಿವಲಿಂಗಪ್ಪ ಹಂದಿಹಾಳು ಅವರ ‘ನೋಟ್ ಬುಕ್’ ಕೃತಿಗೆ ‘ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ.
‘ಯುವ ಪುರಸ್ಕಾರ’ ಮತ್ತು ‘ಬಾಲಸಾಹಿತ್ಯ ಪುರಸ್ಕಾರ’ ಪುರಸ್ಕೃತರು ತಲಾ ₹ 50 ಸಾವಿರ ನಗದು ಹಾಗೂ ಫಲಕಗಳನ್ನು ಪಡೆಯಲಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಕೆ. ಶಿವಲಿಂಗಪ್ಪ ಹದಿಹಾಳು ಹಿನ್ನೆಲೆ: ಮಕ್ಕಳ ಸಾಹಿತಿ ಕೆ. ಶಿವಲಿಂಗಪ್ಪ ಹಂದಿಹಾಳು ಅವರು ಬಳ್ಳಾರಿ ಜಿಲ್ಲೆಯ ಹಂದಿಹಾಳು ಗ್ರಾಮದವರು. ವಿದ್ಯಾಭ್ಯಾಸ ಎಂ.ಎ., ಬಿ.ಇಡಿ (ಪಿ.ಹೆಚ್.ಡಿ).,ಎನ್.ಇ.ಟಿ.(ಕನ್ನಡ) ಪದವೀಧರರು. ಪ್ರಸ್ತುತ ಸ. ಹಿ. ಪ್ರಾ. ಶಾಲೆ ಹಂದಿಹಾಳ ಗ್ರಾಮದ ಶಾಲೆಯಲ್ಲಿ ಸಹ ಶಿಕ್ಷಕರು. ಬಳಪ (ಮಕ್ಕಳ ಮಾಸ ಪತ್ರಿಕೆ) ಸ್ಥಾಪಕ ಸಂಪಾದಕರಾಗಿ, ಕನಕ ಅಧ್ಯಯನ ಸಂಶೋಧನಾ ಸಂಸ್ಥೆಯಿಂದ ಹೊರತರುತ್ತಿರುವ ತತ್ವಪದಗಳ ಸಂಪುಟ ಸಂಪಾದನಾ ಕಾರ್ಯದಲ್ಲಿ ಬಳ್ಳಾರಿ ಜಿಲ್ಲೆಯ ಕ್ಷೇತ್ರ ತಜ್ಞರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಲೇಖಕರ ಕುರಿತು ಪೂರ್ತಿ ಮಾಹಿತಿಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ..
ಆರ್. ದಿಲೀಪ್ ಕುಮಾರ್ ಹಿನ್ನೆಲೆ: ಆರ್. ದಿಲೀಪ್ ಕುಮಾರ್ ಅವರ ಹುಟ್ಟಿದ್ದು1991 ರ ಮಾರ್ಚ್ 16ರಂದು ಮೈಸೂರಿನಲ್ಲಿ. ಮೈಸೂರುನಲ್ಲಿ ಕೆಲವು ಕಾಲ ಇದ್ದು ಸದ್ಯ ಚಾಮರಾಜನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ. ಪದವಿ ಶಿಕ್ಷಣವನ್ನು ಸರಕಾರಿ ಪದವಿ ಕಾಲೇಜು ಚಾಮರಾಜನಗರದಲ್ಲೂ, ಕನ್ನಡ ಸ್ನಾತಕೋತ್ತರದ ಪದವಿಯನ್ನು ಕನ್ನಡ ಸ್ನಾತಕೋತ್ತರ ಕೇಂದ್ರ , ಜೆ ಎಸ್ ಎಸ್ ಕಾಲೇಜು , ಚಾಮರಾಜನಗರದಲ್ಲೂ, ಬಿ ಎಡ್ ಪದವಿಯನ್ನು ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯ ಚಾಮರಾಜನಗರದಲ್ಲೂ ಪಡೆದಿದ್ದಾರೆ.
ಲೇಖಕರ ಕುರಿತು ಪೂರ್ತಿ ಮಾಹಿತಿಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ..




ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.