ಒಂದಿಂಚೂ ನೆಲವನ್ನು ಕನ್ನಡಿಗರು ಬಿಟ್ಟುಕೊಡುವುದಿಲ್ಲ : ದೊಡ್ಡರಂಗೇಗೌಡ

Date: 06-01-2023

Location: ಹಾವೇರಿ


ಕನ್ನಡದ ಒಂದು ಅಂಗುಲ ನೆಲವನ್ನೂ ಬೇರೆಯವರಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ಹೇಳಿದ್ದಾರೆ.

ಕನ್ನಡ - ಮಹಾರಾಷ್ಟ್ರ ರಾಜ್ಯಗಳ ಗಡಿ ಸಮಸ್ಯೆಯಾದ ಬೆಳಗಾವಿ ಎಲ್ಲಿಗೆ ಸೇರಬೇಕು ಎಂಬ ವಿಷಯ ಕುರಿತು ಕರ್ನಾಟಕದ ಜನ ಒಟ್ಟಾಗಿ ಉತ್ತರ ಕೊಟ್ಟಿದ್ದಾರೆ.

ಕನ್ನಡದ ಒಂದು ಅಂಗುಲ ನೆಲವನ್ನೂ ಬೇರೆಯವರಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಖ್ಯಾತೆ ತೆಗೆದು ಬಂದವರ ಖಾತೆಗಳೇ ಇಲ್ಲವಾಗಿಸಬಲ್ಲರು ಕನ್ನಡಿಗರು. ನಾಡಿಗೆ ಅವಮಾನವಾದರೆ ನಮಗೆ ಅವಮಾನ. ನುಡಿಗೆ ಅವಮಾನವಾದರೆ ಕೆರಳುತ್ತದೆ. ನಮ್ಮಭಿಮಾನ ನಾಡು ನುಡಿಗೆ ಅನ್ಯಾಯವಾಗಲು ನಾವು ಕನ್ನಡಿಗರು ಬಿಡುವುದಿಲ್ಲ.

ಬೆಳಗಾವಿಯನ್ನು ನಾವು ಕನ್ನಡಿಗರು ಯಾವ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. ಇದು ನಮ್ಮ ಇಚ್ಛೆ. ಇದು ನಮ್ಮ ಹೃದಯಂತರಾಳದ ವಾಂಛೆ! ನಮ್ಮದಲ್ಲದ ನೆಲವನ್ನು ನಾವು ಅಪೇಕ್ಷಿಸುವುದಿಲ್ಲ. ನಮ್ಮ ರಾಜ್ಯದ ಸ್ವತ್ತನ್ನು ನಮ್ಮ ಸರ್ಕಾರ ಕೂಡ ಬಿಟ್ಟು ಕೊಡುವುದಿಲ್ಲ. ಇದು ಸತ್ಯದ ಮಾತು! ಇದು ಪ್ರತಿ ನಿತ್ಯದ ಮಾತು!

ಇನ್ನು ಗಡಿನಾಡಿಗೆ ಸಂಬಂಧಿಸಿದಂತೆ, ಮಹಾಜನ್ ವರದಿಯೇ ಅಂತಿಮ ಎಂದು ನಮ್ಮ ಸರ್ಕಾರ ಹೇಳಿದೆ. ಕಾಸರಗೋಡಿನಲ್ಲಿ ಕನ್ನಡ ಕಲೆ, ಸಂಸ್ಕೃತಿ, ಭಾಷೆಯ ಉಳಿವಿಗೆ ತೀವ್ರವಾದ ಗಮನವನ್ನು ಕೊಡಬೇಕಾಗಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮದ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಕೆಲಸವಾಗಬೇಕು. ಅಲ್ಲೀಗ ಮಲೆಯಾಳೀಕರಣ ಭರದಿಂದ ನಡೆದಿದೆ. ಕನ್ನಡ ವಿದ್ಯಾರ್ಥಿಗಳು ಕನ್ನಡ ಬಾರದ ಅಧ್ಯಾಪಕರಿಂದ ಪಾಠ ಕೇಳಬೇಕಾದ ವಿಪರ್ಯಾಸದ ಪರಿಸ್ಥಿತಿ ಅಲ್ಲಿದೆ. ಇತ್ತ ಕಡೆ ನಮ್ಮ ಸರ್ಕಾರ ಆದ್ಯ ಗಮನ ನೀಡಬೇಕಿದೆ. ಮಹಾಜನ ವರದಿ ರೂಪಿತವಾದ ಕಾಲಕ್ಕೆ ಮದರಾಸು ಆಡಳಿತದಲ್ಲಿದ್ದ ದಕ್ಷಿಣ ಕನ್ನಡ ಪ್ರದೇಶವನ್ನು ಮೈಸೂರಿನೊಂದಿಗೆ ಸೇರಿಸುವ ವೇಳೆ, ಕಾಸರಗೋಡು ಪ್ರದೇಶವನ್ನು ಕೈಬಿಡಲಾಯಿತು. ಆ ಕಾರಣವೇ ಉದ್ಭವವಾದ ಸಮಸ್ಯೆ ಇದು ಎಂದು ಹೇಳಿದ್ದಾರೆ.

 

MORE NEWS

ವಿಶ್ವ ಸಾಹಿತ್ಯದಲ್ಲಿ ಕನ್ನಡಕ್ಕೆ ಮಹತ್ತರ ಸ್ಥಾನವಿದೆ: ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ

08-01-2023 ಹಾವೇರಿ

ಹಾವೇರಿಯ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ಭಾನುವಾರದಂದು ಕನಕ ಶರೀಫ-ಸರ್ವಜ್ಞ ಪ್ರದಾನ ವ...

ಜನಪದ ಸಾಹಿತ್ಯ, ಕೃಷಿ, ಅನಿವಾಸಿ ಭಾರತೀಯರ ಇಂದಿನ ಸ್ಥಿತಿಗತಿ : ವಿಚಾರಗೋಷ್ಠಿ

08-01-2023 ಹಾವೇರಿ

ಹಾವೇರಿ : ಬರವಣಿಗೆಯ ಯುಗದಲ್ಲಿ ಮಹಿಳೆ ಸಾಹಿತ್ಯದಲ್ಲಿ ಹಿಂದೆ ಬಿದ್ದಿರುವುದೇಕೇ ಎಂಬ ಪ್ರಶ್ನೆ ಬಹುವಾಗಿ ಕಾಡುತ್ತಿದೆ ಎನ...

ಕನ್ನಡ ಸಬಲೀಕರಣ ಕಾಯ್ದೆ ಜಾರಿಗೆ ಒತ್ತಾಯ : ರೇವಣಸಿದ್ದಪ್ಪ

08-01-2023 ಹಾವೇರಿ

ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆರಂಭಕ್ಕೆ ಮುಕ್ತ ಅವಕಾಶ ನೀಡುವ ಮೂಲಕ ಕನ್ನಡದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುವುದು ...