Story/Poem

ಅನಿತಾ ಪಿ. ತಾಕೊಡೆ

ಅನಿತಾ ಪಿ. ತಾಕೊಡೆ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪದ ತಾಕೊಡೆಯವರು. ಪ್ರಸ್ತುತ ಮುಂಬಯಿ ನಿವಾಸಿ. ಇವರು ಕವಿಯಾಗಿ, ಕಥೆಗಾರರಾಗಿ, ಅಂಕಣಕಾರರಾಗಿ  ಹೆಸರು ಮಾಡಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ  ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇವರು 2019ರಲ್ಲಿ  ಮೈಸೂರು ಅರಮನೆಯ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿದ್ದಾರೆ. ಇವರ ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಪಿಎಚ್.ಡಿ ಕೋರ್ಸ್‍ವರ್ಕ್‍ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬಯಿ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ ಮತ್ತು ಡಾ.ವಿಶ್ವನಾಥ ಪ್ರತಿಷ್ಠಾನದ ವತಿಯಿಂದ ‘ವಿಕಾಸ ಪುಸ್ತಕ’ ಬಹುಮಾನ ಲಭಿಸಿದೆ.  ನಿವಾಳಿಸಿಬಿಟ್ಟ ಕೋಳಿ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ, ಮಾಣಿಕ್ಯ ಪ್ರಕಾಶನ ಹಾಸನದಿಂದ ‘ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ’ ಲಭಿಸಿದೆ. ‘ಮೋಹನ ತರಂಗ’ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. 

More About Author

Story/Poem

ಸುಮ್ಮನೆ ನಗುತ್ತೇನೆ

ನಗುವೆಂದರೆ ಹೀಗಿದ್ದರೆ ಚಂದವೆಂದು ಬೆರಳು ತೋರಿಸಿ, ಹಾಗೇ ಮುಖವರಳಿಸಿ ನನ್ನಂತೆ ನಗುವವರ ನೆನೆ ನೆನೆದು ಈಗೀಗ ಸುಮ್ಮನೆ ನಗುತ್ತೇನೆ ಅವರ ಗೆಲುವಿಗಾದರೂ ಸರಿ ನನ್ನ ಚೆಲುವಿಗಾದರೂ ಸರಿ ಮತ್ತೆ ಮತ್ತೆ ನಗಬೇಕು ಒಲ್ಲದವುಗಳ ಒಳಗೊಳಗೇ ಮುರುಕಿ ಕೊಚ್ಚೆಯೊಳಬಿದ್ದು ಮಣ್ಣ ಮೆತ್ತಿಸಿಕೊಂ...

Read More...